ಮಡಿಕೇರಿ, ನ. ೨೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಜಿಲ್ಲೆಯ ವಿವಿಧೆಡೆಯಿಂದ ೧೦೦ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ೯-೧೨ ಹಾಗೂ ೧೩-೧೬ ವರ್ಷದ ಮಕ್ಕಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಆಯೋಜಿಸ ಲಾಗಿತ್ತು ಹಾಗೂ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಮಕ್ಕಳನ್ನು ಬೆಂಗಳೂರಿ ನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು.
ಮಕ್ಕಳ ದಿನಾಚರಣೆ ಕಾರ್ಯಕ್ರಮ ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಮಹಾದೇವ ಸ್ವಾಮಿ, ಡಿಡಿಪಿಐ ಕಚೇರಿಯ ಕೃಷ್ಣಪ್ಪ ಎಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ನಟರಾಜ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಸದಾಶಿವ ಪಲ್ಲೇದ್, ಮಡಿಕೇರಿ ತಾಲೂಕು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಹಾಗೂ ತೀರ್ಪುಗಾರರು ಮತ್ತು ಪೋಷಕರು ಭಾಗವಹಿಸಿದ್ದರು. ಶಿಕ್ಷಣಾಧಿಕಾರಿ ಮಹಾದೇವ ಸ್ವಾಮಿ ಮಾತನಾಡಿ, ಮಕ್ಕಳು ವಿವಿಧ ಸಾಂಸ್ಕೃತಿಕ ಕಲಾ ಪ್ರಕಾರಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ಸಾಹ ಹೆಚ್ಚಾಗುತ್ತದೆ. ಇದರಿಂದ ಪಠ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಅವರು ಸ್ಪರ್ಧಾ ಮಾರ್ಗಸೂಚಿ ನಿಯ ಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ವಹಿಸಿದ್ದರು. ಮಕ್ಕಳ ಸ್ಪರ್ಧಾ ಕಾರ್ಯ ಕ್ರಮದಲ್ಲಿ ಚಿತ್ರಕಲಾ ವಿಭಾಗದಲ್ಲಿ ಫರ್ಹಾನ, ತಶ್ಮಿಕ, ಪ್ರಣವತಿ ರಾಮಕೃಷ್ಣ, ಮೊಹಮ್ಮದ್ ಸುಹಾನ್, ವಿಜ್ಞಾನ ಸೃಜನಾತ್ಮಕ ಆವಿಷ್ಕಾರದಲ್ಲಿ ಶಿವಕುಮಾರ್ ಹೆಚ್.ಆರ್ ಹಾಗೂ ಭೂಮಿಕಾ ಜೆ.ಕೆ., ಸೃಜನಾತ್ಮಕ ಪ್ರದರ್ಶನ ಕಲೆಗಳಲ್ಲಿ ದಿಶಿಕಾ ಸಿ.ಹೆಚ್., ಯಶಿಕಾ ಬಿ.ಎಂ., ಅನಘ ಬಿ.ಎಸ್., ಧನ್ಯ ಕೆ., ಮಕ್ಕಳು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು ಹಾಗೂ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಬಹುಮಾನವನ್ನು ಹಾಗೂ ಪ್ರಮಾಣ ಪತ್ರವನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಶಂಸನಾ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಗಳು ಹಾಜರಿದ್ದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಸ್ವಾಗತಿಸಿದರು.