ಸಿದ್ದಾಪುರ, ನ. ೨೨: ಕರಡಿಗೋಡು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಶಾಶ್ವತ ಯೋಜನೆ ಯನ್ನು ರೂಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕರಡಿಗೋಡು ಗ್ರಾಮದ ಟೀಕ್‌ವುಡ್ ಕಾಫಿ ತೋಟ ದೊಳಗೆ ಕಾಡಾನೆಗಳು ಬೀಡುಬಿಟ್ಟಿದ್ದು ದಾಂಧಲೆ ನಡೆಸುತ್ತಿವೆ. ಅಲ್ಲದೇ ಕೃಷಿ ಫಸಲುಗಳನ್ನು ಹಾನಿಗೊಳಿಸುತ್ತಿದೆಂದು ಬೆಳೆಗಾರರು ತಿಳಿಸಿದ್ದಾರೆ. ರಾತ್ರಿ ಸಮಯದಲ್ಲಿ ಕಾಡಾನೆಗಳು ಮನೆಗಳ ಸುತ್ತಲೂ ಓಡಾಡುತ್ತಿದ್ದು ಭಯದ ವಾತಾವರಣ ನಿರ್ಮಾಣವಾಗಿದೆಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ. ಕೂಡಲೇ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.