ಕುಶಾಲನಗರ, ನ. ೨೩: ಕುಶಾಲನಗರದಲ್ಲಿ ನಡೆದ ನಕಲಿ ಐಟಿ ಅಧಿಕಾರಿಗಳ ದಾಳಿ ಪ್ರಕರಣಕ್ಕೆ ಸಂಬAಧಿಸಿದAತೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ.
ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ನಾಲ್ವರ ಬಂಧನವಾಗಿದ್ದು, ತಲೆಮರೆಸಿಕೊಂಡಿರುವ ಇನ್ನೊಬ್ಬ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆದಿದೆ.
ಆರೋಪಿ ಪತ್ತೆ ಕಾರ್ಯಕ್ಕೆ ಕುಶಾಲನಗರ ಪೊಲೀಸರ ತಂಡ ಉಡುಪಿ ಕಡೆಗೆ ತೆರಳಿದ್ದು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಇತ್ತ ಇನ್ನೊಂದು ತಂಡ ಬೆಂಗಳೂರಿಗೆ ತೆರಳಿದ್ದು ಬಂದಿತ ವ್ಯಕ್ತಿಗಳು ನೆಲೆಸಿರುವ ನಿವಾಸಗಳಲ್ಲಿ ದಾಖಲೆ ಪರಿಶೀಲನೆ ಕೈಗೊಳ್ಳಲಿದ್ದಾರೆ.
ಕುಶಾಲನಗರ ಸಮೀಪದ ಗುಮ್ಮನಕೊಲ್ಲಿ ಗ್ರಾಮದಲ್ಲಿ ತಮ್ಮ ಮನೆಗೆ ನಕಲಿ ಐಟಿ ಅಧಿಕಾರಿಗಳ ದಾಳಿ ಬಗ್ಗೆ ದೂರು ನೀಡಿದ ಡಾ. ಪ್ರವೀಣ್ ದೇವರಗುಂಡ ಕೇಂದ್ರ ಮಾಜಿ ಸಚಿವ ಸದಾನಂದ ಗೌಡ ಅವರ ಸಂಬAಧಿಯಾಗಿದ್ದು, ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪ್ರಕರಣ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಗೃಹ ಸಚಿವರಿಗೆ ಕೋರಿದ್ದಾರೆ. ನಕಲಿ ಐಟಿ ಅಧಿಕಾರಿಗಳ ಸೋಗಿನಲ್ಲಿ ಆಗಮಿಸಿ ದಾಳಿ ಮಾಡಿದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಕೊಡಗು ಜಿಲ್ಲಾ ಪೊಲೀಸ್ ತಂಡದ ಕಾರ್ಯವೈಖರಿ ಬಗ್ಗೆ ಕುಶಾಲನಗರ ನಾಗರಿಕರು ಸೇರಿದಂತೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.