ಕುಶಾಲನಗರ, ನ. ೨೨: ವಿದ್ಯಾರ್ಥಿಗಳು ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಕರೆ ನೀಡಿದರು.
ಕುಶಾಲನಗರ ವಿವೇಕಾನಂದ ಪಿಯು ಕಾಲೇಜಿನಲ್ಲಿ ಆಯೋಜಿಸಿದ ಕ್ರೀಡೋತ್ಸವ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆಯ ಬಗ್ಗೆ ತಿಳುವಳಿಕೆ ಅಗತ್ಯವಾಗಿದ್ದು, ಯಾವುದೇ ಸಂದರ್ಭ ಸಮಯ ವ್ಯರ್ಥವಾಗದಂತೆ ಎಚ್ಚರವಹಿಸಬೇಕಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೂಡುಮಂಗಳೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪ್ರಕೃತಿಯ ಬಗ್ಗೆ ಕಾಳಜಿ ವಹಿಸಬೇಕು. ಉತ್ತಮ ಪರಿಸರ ನಿರ್ಮಾಣ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.
ವಿವೇಕಾನAದ ಕಾಲೇಜು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕ್ರೀಡೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಹಲವು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತ ತಂಡಗಳಿಗೆ ಮತ್ತು ವೈಯಕ್ತಿಕ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಂ.ಎನ್. ಚಂದ್ರಮೋಹನ್, ಟಿ.ಜಿ. ಪ್ರೇಮ್‌ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಸ್ಥೆಯ ಆಡಳಿತ ಅಧಿಕಾರಿ ಮಹೇಶ್ ಅಮೀನ್, ಕಚೇರಿ ಅಧೀಕ್ಷಕ ಎನ್.ಎನ್. ನಂಜಪ್ಪ, ಉಪನ್ಯಾಸಕರಾದ ವಿಕ್ರಂ, ಚಂದ್ರಶೇಖರ್, ಮತ್ತಿತರರು ಇದ್ದರು. ಉಪನ್ಯಾಸಕಿ ಮೇರಿ ಪ್ರಿಯ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ದಿನೇಶ್ ವಂದಿಸಿದರು.