ಕೂಡಿಗೆ, ನ. ೨೪: ಕೂಡಿಗೆಯ ಶ್ರೀ ದಂಡಿನಮ್ಮ, ಶ್ರೀ ಬಸವೇಶ್ವರ ಹಾಗೂ ಮುತ್ತತ್ ರಾಯ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷರಾಗಿ ಕೆ.ಕೆ. ಸೋಮಶೇಖರ್ (ಮಂಜುನಾಥ) ಆಯ್ಕೆಯಾಗಿದ್ದಾರೆ.
ಶ್ರೀ ಬಸವೇಶ್ವರ ದೇವಸ್ಥಾನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಕೆ.ಎನ್. ಮಂಜುನಾಥ್, ಕಾರ್ಯದರ್ಶಿಯಾಗಿ ಕೆ.ಎಸ್. ಚಂದ್ರಶೇಖರ್, ಉಪ ಕಾರ್ಯದರ್ಶಿಯಾಗಿ ಕೆ.ಎಸ್. ಶೇಖರ್ ಶೆಟ್ಟಿ ಹಾಗೂ ನಿರ್ದೇಶಕರುಗಳನ್ನು ಆಯ್ಕೆ ಮಾಡಲಾಯಿತು.