ಮಡಿಕೇರಿ, ನ.೨೪ : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ೩೩ನೇ ವರ್ಷದ ಕೊಡವ ನ್ಯಾಷನಲ್ ಡೇ ಮತ್ತು ಭಾರತೀಯ ಸಂವಿಧಾನ ದಿನದ ಆಚರಣೆ ತಾ. ೨೬ ರಂದು ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೊಡವರ ಸಾಂವಿಧಾನಿಕ ಭದ್ರತೆಗಾಗಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಪ್ರಮುಖ ಬೇಡಿಕೆಯನ್ನು ಮುಂದಿಟ್ಟುಕೊAಡು ಹಕ್ಕೊತ್ತಾಯ ಮಂಡಿಸಲಾಗುವುದು ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ದಿನವನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಕೊಡವರ ಭದ್ರತೆಗಾಗಿ ಸಂವಿಧಾನದ ಆರ್ಟಿಕಲ್ ೨೪೪ ಆರ್/ಡಬ್ಲ್ಯೂ ೬ನೇ ಮತ್ತು ೮ನೇ ಶೆಡ್ಯೂಲ್ ಅಡಿಯಲ್ಲಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡುವುದು ಅನಿವಾರ್ಯವೆಂದು ಸಭೆಯಲ್ಲಿ ಪ್ರತಿಪಾದಿಸಲಾಗುವುದು ಎಂದು ನಾಚಪ್ಪ ತಿಳಿಸಿದ್ದಾರೆ.