ಮಡಿಕೇರಿ, ನ.೨೪ : ವಿಶ್ವ ಹಿಂದೂ ಪರಿಷದ್ ವತಿಯಿಂದ ನ.೨೬ ರಂದು ಭಾಗಮಂಡಲದಲ್ಲಿ ಕಾವೇರಿ ಆರತಿ ನಡೆಯಲಿದೆ.
ಸಂಜೆ ೫ ಗಂಟೆಗೆ ಭಾಗಮಂಡಲದ ಕಾವೇರಿ, ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಭಜನೆ, ವೇದಘೋಷಗಳೊಂದಿಗೆ ಕಾವೇರಿ ತಾಯಿಗೆ ಆರತಿ ನೆರವೇರಲಿದೆ. ಮುಖ್ಯ ಭಾಷಣಕಾರರಾಗಿ ಸುವರ್ಣ ನ್ಯೂಸ್ ಚಾನಲ್ನ ಸಂಪಾದಕ ಹಾಗೂ ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ಪಾಲ್ಗೊಳ್ಳಲಿದ್ದಾರೆ. ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಕಾರ್ಯದರ್ಶಿ ಜಗನ್ನಾಥ ಶಾಸ್ತಿç ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.