ಕೂಡಿಗೆ, ನ. ೨೫: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಡೆಬೆಟ್ಟದ ಹಾಡಿಗೆ ಅಲ್ಲಿನ ನಿವಾಸಿಗಳ ದೂರಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದ ತಂಡ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.

ಬೆಂಡೆಬೆಟ್ಟದ ಹಾಡಿಯಲ್ಲಿ ಕೆಲ ಮನೆಗಳಿಗೆ ವಿದ್ಯುತ್ ಸಂಪರ್ಕ ಮತ್ತು ಹೊಸ ಮನೆಗಳ ನಿರ್ಮಾಣಕ್ಕೆ ಸಂಬAಧಿಸಿದAತೆ ಅನೇಕ ರೀತಿಯ ಸಮಸ್ಯೆಗಳು ಇರುವುದರ ಬಗ್ಗೆ ಅಲ್ಲಿನ ನಿವಾಸಿಗಳು ತಿಳಿಸಿದ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯ ಸೋಮವಾರಪೇಟೆ ತಾಲೂಕು ಅಧಿಕಾರಿ ಸಿದ್ದೇಗೌಡ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಖುದ್ದಾಗಿ ಹಾಡಿಗೆ ತೆರಳಿ ಅಲ್ಲಿನ ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯದಲ್ಲಿ ತೊಡಗಿದರು. ಈಗಾಗಲೇ ಇಲಾಖೆಯ ಮುಖೇನ ವರ್ಷಂಪ್ರತಿಯAತೆ ಈ ಸಾಲಿನಲ್ಲಿ ೧೦ ಅರ್ಹ ಫಲಾನುಭವಿಗಳಿಗೆ ಹಂತ ಹಂತವಾಗಿ ಮನೆಗಳು ಮಂಜೂರು ಆಗಿ ಸರಕಾರ ನಿಯಮಾನುಸಾರ ಫಲಾನುಭವಿಯೇ ಮನೆಯನ್ನು ನಿರ್ಮಿಸಿಕೊಳ್ಳಲು ಅವಕಾಶವನ್ನು ಒದಗಿಸಿದ್ದು ಅದರ ಹಣವು ಸಹ ನೇರವಾಗಿ ಅವರ ಖಾತೆಗೆ ಸೇರುವ ವ್ಯವಸ್ಥೆಯನ್ನು ಕಲಾ ಮೂಲಕ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದರು. ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯುತ್ ಸೌಲಭ್ಯಗಳು ಇಲ್ಲದ ಮನೆಗಳಿಗೆ ಮನೆಗಳ ಸಂಖ್ಯೆಯನ್ನು ನೋಂದಣಿ ಮಾಡಿ ಸಂಬAಧಿಸಿದ ಇಲಾಖೆಯ ಮೂಲಕ ಅತಿ ಶೀಘ್ರದಲ್ಲಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಯಕ್ ತಿಳಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ದಿನೇಶ್, ಹಾಡಿ ನಿವಾಸಿಯಾದ ಹರೀಶ್, ಗಣೇಶ್, ರವಿ, ಅಜಿತ್, ಕೀರ್ತನ ಮತ್ತಿತರರು ಹಾಜರಿದ್ದರು.