ಸೋಮವಾರಪೇಟೆ, ನ. ೨೫: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಫುಟ್ಬಾಲ್ ಕ್ರೀಡಾಕೂಟದಲ್ಲಿ ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗದ ಪರವಾಗಿ ಸ್ಪರ್ಧಿಸಿ ದ್ವಿತೀಯ ಸ್ಥಾನವನ್ನು ಪಡೆದರು.
ಪಂದ್ಯಾಟದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳಾದ ಜಿ.ಆರ್. ಕೌಶಿಕ್, ಮಹಮ್ಮದ್ ಸುಫೈಲ್ ಹಾಗೂ ಎಚ್.ಎಸ್. ಸಂಜಯ್ ಅವರುಗಳು ರಾಷ್ಟçಮಟ್ಟದ ಫುಟ್ಬಾಲ್ ತಂಡಕ್ಕೆ ಆಯ್ಕೆಯಾದರು. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಜಿ.ಈ. ಪ್ರವೀಣ್ ಕುಮಾರ್ ತರಬೇತಿ ನೀಡಿದ್ದಾರೆ.