ಮಡಿಕೇರಿ, ನ. ೨೪: ಉಸ್ತುವಾರಿ ಸಚಿವರ ಆಪ್ತಸಹಾಯಕರು ಅಥವಾ ಕಚೇರಿ ಹೆಸರಿನಲ್ಲಿ ಹಣ ಕೇಳವವರ ವಿರುದ್ಧ ದೂರು ದಾಖಲಿಸಿ ತನಿಖೆ ನಡೆಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರು ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಸೂಚನೆ ನೀಡಿದ್ದಾರೆ ಎಂದು ಆಪ್ತ ಕಾರ್ಯದರ್ಶಿಗಳಾದ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.
ಆಪ್ತ ಸಹಾಯಕರ ಸೋಗಿನಲ್ಲಿ ಅಧಿಕಾರಿಗೆ ಹಣಕ್ಕೆ ಬೇಡಿಕೆಯಿಟ್ಟಿರುವ ಪ್ರಕರಣದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ. ಯಾರೇ ಹಣಕ್ಕೆ ಬೇಡಿಕೆಯಿಡುವುದು ಕಂಡುಬAದಲ್ಲಿ ಕೂಡಲೇ ಪ್ರಕರಣ ದಾಖಲಿಸಬೇಕು. ಹಾಗೆಯೇ, ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
ಸಾರ್ವಜನಿಕರು ಹಾಗೂ ಅಧಿಕಾರಿಗಳು ಇಂತಹ ಪ್ರಕರಣಗಳ ಬಗ್ಗೆ ಯಾವುದೇ ಹಿಂಜರಿಕೆಯಿಲ್ಲದೆ ಪೊಲೀಸರಿಗೆ ದೂರು ನೀಡಬೇಕು ಎಂದು ವೀರಭದ್ರ ಹಂಚಿನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.