ಕೂಡಿಗೆ, ನ. ೨೫: ಕೂಡಿಗೆ ಗ್ರಾಮ ಪಂಚಾಯಿತಿ ೨೦೨೩-೨೪ ನೇ ಸಾಲಿನ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸಂಬAಧಿಸಿದ ವಿಶೇಷ ಗ್ರಾಮ ಸಭೆ ಅಧ್ಯಕ್ಷ ಕೆ.ಟಿ. ಗಿರೀಶ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೈಗೊಳ್ಳುವ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚೆ ಸೇರಿದಂತೆ ಮುಂದಿನ ದಿನಗಳಲ್ಲಿ ಕಾಮಗಾರಿಗಳನ್ನು ಆರಂಭ ಮಾಡುವುದಕ್ಕೆ ಸಂಬAಧಿಸಿದAತೆ ಗ್ರಾಮಸ್ಥರ ಸಮ್ಮುಖದಲ್ಲಿ ಕಾಮಗಾರಿಗಳ ಸೇರ್ಪಡೆ, ಕ್ರಿಯಾ ಅನುಮೋದನೆ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ಗ್ರಾಮಸಭೆಯಲ್ಲಿ ನಡೆದವು.
ಅಧ್ಯಕ್ಷತೆ ವಹಿಸಿದ್ದ ಕೆ.ಟಿ. ಗಿರೀಶ್ ಮಾತನಾಡಿ, ಗ್ರಾಮಸ್ಥರು ಉದ್ಯೋಗ ಖಾತರಿ ಯೋಜನೆಗೆ ತಮ್ಮ ಹೆಸರು ನೊಂದಣಿ ಮಾಡಿಕೊಂಡು ಅದರ ಮೂಲಕ ತಮ್ಮ ತಮ್ಮ ವ್ಯಾಪ್ತಿಯ ಕಾಮಗಾರಿಗಳನ್ನು ನಿರ್ವಹಿಸುವಂತೆ ಮನವಿ ಮಾಡಿದರು. ಈ ಯೋಜನೆಯ ಅಡಿಯಲ್ಲಿ ಉತ್ತಮವಾದ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಇರುವುದರಿಂದ ಗ್ರಾಮಸ್ಥರು ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೋರಿದರು.
ಸಭೆಯ ನೋಡಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಯಾದವ್ ಬಾಬು ಆಗಮಿಸಿದರು. ಸಭೆಯಲ್ಲಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಮೋಹಿನಿ ತಮ್ಮಣೇಗೌಡ, ಮಂಗಳಾ, ಜಯಶೀಲಾ, ಅಭಿವೃದ್ಧಿ ಅಧಿಕಾರಿ ಮಂಜಳಾ, ಕಾರ್ಯದರ್ಶಿ ಪುನೀತ್ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ಹಾಜರಿದ್ದರು.