ನಾಪೋಕ್ಲು, ನ. ೨೫: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸುವರ್ಣ ಕರ್ನಾಟಕ ೫೦ರ ಸಂಭ್ರಮದ ಅಂಗವಾಗಿ ಹೋಬಳಿ ಮಟ್ಟದ ಗ್ರಾಮ ಸಿರಿ ಕಾರ್ಯಕ್ರಮವನ್ನು ಚೆಟ್ಟಿಮಾನಿಯಲ್ಲಿ ಭಾಗಮಂಡಲ, ಅಯ್ಯಂಗೇರಿ ಮತ್ತು ಕುಂದಚೇರಿ ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು. ಚೆಟ್ಟಿಮಾನಿಯ ಶಾದಿ ಮಹಲ್‌ನಲ್ಲಿ ಕುಂದಚೇರಿ ಗ್ರಾಮ ಪಂಚಾಯತ್ ಅಧ್ಯಕ್ಷ ಪೊಡನೋಳನ ವಿ. ದಿನೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಅವರು ಗ್ರಾಮಸಿರಿ ಕಾರ್ಯಕ್ರಮವನ್ನು ಚೆಟ್ಟಿಮಾನಿಯಲ್ಲಿ ನಡೆಸುವ ಬಗ್ಗೆ ಗ್ರಾಮಸ್ಥರಿಂದ ಒಪ್ಪಿಗೆ ಪಡೆದು ಕಾರ್ಯಕ್ರಮದ ಉದ್ದೇಶ ಹಾಗೂ ರೂಪುರೇಷೆಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಈ ಬಗ್ಗೆ ಕಾರ್ಯಕ್ರಮ ನಡೆಸುವ ದಿನಾಂಕ ನಿಗದಿಪಡಿಸುವುದು ಹಾಗೂ ಉಪಸಮಿತಿಗಳ ರಚನೆ ಮಾಡುವ ಕುರಿತು ಡಿಸೆಂಬರ್ ೫ ರಂದು ಭಾಗಮಂಡಲ ಅಯ್ಯಂಗೇರಿ ಹಾಗೂ ಕುಂದಚೇರಿ ಗ್ರಾಮಸ್ಥರ ಸಭೆಯನ್ನು ಕರೆಯುವಂತೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಯಾದವ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ರೇವತಿ ರಮೇಶ್, ಕೋಶಾಧಿಕಾರಿ ಸಂಪತ್ ಕುಮಾರ್, ಭಾಗಮಂಡಲ ಹೋಬಳಿ ಘಟಕದ ಅಧ್ಯಕ್ಷ ಸುನಿಲ್ ಪತ್ರವೋ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಪುದಿಯನೆರವನ ರಿಶಿತ್ ಮಾದಯ್ಯ, ಸಂಘಟನಾ ಕಾರ್ಯದರ್ಶಿಗಳಾದ ತಳೂರು ದಿನೇಶ್ ಕರುಂಬಯ್ಯ, ಚೊಕ್ಕಾಡಿ ಪ್ರೇಮ ರಾಘವಯ್ಯ, ಪಂಚಾಯಿತಿ ಸದಸ್ಯರಾದ ಹಾರಿಸ್, ಬೊಮ್ಮಿಯನ ಬಸಪ್ಪ ಗ್ರಾ.ಪಂ. ಸದಸ್ಯರು ಸ್ತಿçà ಶಕ್ತಿ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತೆಯರು ಸಂಜೀವಿನಿ ಒಕ್ಕೂಟ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ ಸದಸ್ಯರು ಶಾಲೆಗಳ ಮುಖ್ಯೋಪಾಧ್ಯಾಯರು ಊರಿನ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.