ಮಡಿಕೇರಿ, ನ. ೨೪: ಸುವರ್ಣ ಕರ್ನಾಟಕ ೫೦ ಪ್ರಯುಕ್ತ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನೆಬ್ಬೂರು ಗೌಡ ಸಂಘ ಬಲಮುರಿ ಇವರ ಸಂಯುಕ್ತ ಆಶ್ರಯದಲ್ಲಿ ಜಾನಪದ ಸಿರಿ ಕಾರ್ಯಕ್ರಮವು ತಾ. ೨೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಬಲಮುರಿ ಕಟ್ರತನ ಮೊಟ್ಟೆಕೊಡಿ ಬಾಣೆಯಲ್ಲಿ ನಡೆಯಲಿದೆ.
ಬಲಮುರಿ ಹಿರಿಯ ಕ್ರೀಡಾಪಟು ಪೊನ್ನಚನ ಕೆ. ಮಾದಪ್ಪ ಅವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ನಂತರ ಬೆಳಿಗ್ಗೆ ೧೧ ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್, ಮಡಿಕೇರಿ ವಕೀಲರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಲಮುರಿ ನೆಬ್ಬೂರು ಗೌಡ ಸಂಘದ ಸಲಹಾ ಸಮಿತಿ ಸದಸ್ಯರಾದ ಕೊಟ್ಟಕೇರಿಯನ ಡಿ. ದಯಾನಂದ, ಬಲಮುರಿ ನೆಬ್ಬೂರು ಗೌಡ ಸಂಘದ ಅಧ್ಯಕ್ಷರಾದ ಕಟ್ರತನ ಬಿ. ಲೋಕನಾಥ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಡಾ. ಮೇಚಿರ ಸುಭಾಷ್ ನಾಣಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.
ನಂತರ ಮಧ್ಯಾಹ್ನ ೨ ಗಂಟೆಗೆ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.