ಮಡಿಕೇರಿ, ನ. ೨೪: ಕನಕದಾಸರ ಜಯಂತಿಯನ್ನು ತಾ. ೩೦ ರಂದು ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯ ಗಾಂಧಿ ಭವನದಲ್ಲಿ ಕನಕದಾಸರ ಜಯಂತಿ ಯನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಯಿತು.

ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಮಾತನಾಡಿ, ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ವತಿಯಿಂದ ವ್ಯವಸ್ಥಿತ ವಾಗಿ ಆಯೋಜಿಸಲಾಗುವುದು. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.

ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಉಪನ್ಯಾಸಕರ ಹೆಸರನ್ನು ತಿಳಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಆರಂಭದಲ್ಲಿ ಮಾತನಾಡಿದ ಕನಕ ಗುರುಪೀಠ ಮತ್ತು ಧರ್ಮದರ್ಶಿ ಎಂ. ನಂಜುAಡಸ್ವಾಮಿ ಅವರು ಕೊಡಗು ಜಿಲ್ಲಾ ಕೇಂದ್ರದಲ್ಲಿ ಕನಕ ದಾಸರ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಯೋಜಿಸು ವಂತಾಗಬೇಕು ಎಂದು ಮನವಿ ಮಾಡಿದರು.

ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕುರುಬ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ೨೫ ಸೆಂಟು ಜಾಗ ಗುರುತಿಸು ವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಮುಖ್ಯಮಂತ್ರಿ ಅವರು ಜನವರಿ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಆ ಸಂದರ್ಭದಲ್ಲಿ ಕುರುಬ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವಂತಾಗಲು ಅವಕಾಶ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರಲ್ಲಿ ಕೋರಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕುಶಾಲನಗರ ಸುತ್ತಮುತ್ತ ಜಾಗ ಗುರುತಿಸುವಂತಾಗಲು ತಹಶೀಲ್ದಾರರ ಜತೆ ಚರ್ಚಿಸುವಂತೆ ಸಲಹೆ ಮಾಡಿದರು.

ಸಂಗೊಳ್ಳಿ ರಾಯಣ್ಣ ಕುರುಬ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಪ್ರಭಾಕರ್ ಅವರು ಮಾತನಾಡಿ, ಕುಶಾಲ ನಗರದಲ್ಲಿ ಕನಕದಾಸರ ಜಯಂತಿ ಕಾರ್ಯಕ್ರಮ ಆಯೋಜನೆಗೆ ಅವಕಾಶ ಮಾಡಬೇಕು ಎಂದು ಕೋರಿದರು.

ಕುರುಬ ಸಮಾಜದ ಪ್ರಧಾನ ಕಾರ್ಯದರ್ಶಿ ಗಂಗಾಧರ ಅವರು ಮಾತನಾಡಿ, ಸಮಾಜದ ಹಿರಿಯರಿಗೆ ಸನ್ಮಾನಿಸುವಂತಾಗಬೇಕು ಎಂದು ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಎಸ್‌ಎಸ್‌ಎಲ್‌ಸಿ, ಪಿಯುಸಿ, ಸಿಇಟಿ/ ನೀಟ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದವರನ್ನು ಅಭಿನಂದಿಸ ಲಾಗುವುದು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಎಸ್‌ಎಸ್‌ಎಲ್‌ಸಿ, ಪಿಯುಸಿ, ಸಿಇಟಿ/ ನೀಟ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದವರನ್ನು ಅಭಿನಂದಿಸ ಲಾಗುವುದು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ