ಮಡಿಕೇರಿ ನ. ೨೪: ಮಡಿಕೇರಿ ನಗರ ವಕೀಲರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ವಕೀಲರ ಕ್ರೀಡಾಕೂಟ ಹಾಗೂ ಸಂವಿಧಾನ ದಿನಾಚರಣೆ ಕಾರ್ಯಕ್ರಮ ತಾ. ೨೬ ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ.ಎ. ನಿರಂಜನ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆಯಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಎಂ.ಜಿ. ಉಮಾ ಮುಖ್ಯ ಭಾಷಣಗಾರರಾಗಿ ಭಾಗವಹಿಸಲಿದ್ದಾರೆ. ೯.೩೦ ಗಂಟೆಗೆ ಸಂಘದ ಅಧ್ಯಕ್ಷ ಎಂ.ಎ. ನಿರಂಜನ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕ್ರೀಡಾಕೂಟ ಉದ್ಘಾಟನೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ಯಾಮ್ ಪ್ರಸಾದ್ ನೆರವೇರಿಸಲಿದ್ದು, ೫ ತಾಲೂಕು ಸಂಘಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಪುರುಷರಿಗೆ ಕ್ರಿಕೆಟ್, ಮಹಿಳೆಯರಿಗೆ ಥ್ರೋಬಾಲ್, ಮಡಿಕೇರಿ ವಕೀಲರ ಸಂಘದ ಸದಸ್ಯರಿಗೆ ವಿವಿಧ ರೀತಿಯ ಅಥ್ಲೆಟಿಕ್ಸ್ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.

ಅತಿಥಿಗಳಾಗಿ ಮಾಜಿ ಕಾನೂನು ಸಚಿವ ಎಂ.ಸಿ. ನಾಣಯ್ಯ, ಮಾಜಿ ಸಭಾಪತಿ ಕೆ.ಜಿ.ಬೋಪಯ್ಯ, ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಪ್ರಶಾಂತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ. ಪ್ರಸಾದ್, ಸಿವಿಲ್ ನ್ಯಾಯಾಧೀಶರಾದ ಎನ್.ಬಿ. ಜಯಲಕ್ಷ್ಮಿ, ಪ್ರಿನ್ಸಿಪಾಲ್ ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಮುನಿರತ್ನಮ್ಮ, ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ನಾಗೇಶ್, ಜಿಲ್ಲಾ ಸರಕಾರಿ ಅಭಿಯೋಜಕ ಶ್ರೀಧರ್ ನಾಯರ್, ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಕೆ.ಜಿ. ಅಪ್ಪಣ್ಣ, ಕುಶಾಲನಗರದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಬಾಬು, ಸೋಮವಾರಪೇಟೆ ಅಧ್ಯಕ್ಷ ವಿಠಲ ಕಾಟ್ನಮನೆ, ಪೊನ್ನಂಪೇಟೆ ಅಧ್ಯಕ್ಷ ಮುತ್ತಪ್ಪ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಅಂದು ಸಂಜೆ ೫ ಗಂಟೆಗೆ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ವಿಶೇಷ ಸರಕಾರಿ ಅಭಿಯೋಜಕ ಎಂ.ಎA. ಕಾರ್ಯಪ್ಪ, ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷ ಎಂ.ಪಿ. ನಾಗರಾಜು, ಪ್ರಧಾನ ಕಾರ್ಯದರ್ಶಿಡಿ.ಎಂ. ಕೇಶವ, ಖಜಾಂಜಿ ಜಿ.ಆರ್. ರವಿಶಂಕರ್, ಜಂಟಿ ಕಾರ್ಯದರ್ಶಿ ಎ.ಎ. ಪೆಮ್ಮಯ್ಯ, ಹಿರಿಯ ವಕೀಲರುಗಳಾದ ಕೆ.ಡಬ್ಲೂö್ಯ. ಬೋಪಯ್ಯ , ಕೆ.ಎ. ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು.

ಡಿ. ೩ ರಂದು ನಗರದ ಹೊರವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ವಕೀಲರ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಉದ್ಘಾಟಕರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕರ್ನಾಟಕ ವಕೀಲರ ಪರಿಷತ್ತಿನ ಅಧ್ಯಕ್ಷ ವಿಶಾಲ ರಘು, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೆಚ್.ಸಿ. ಶ್ಯಾಂಪ್ರಸಾದ್ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಕಾರ್ಯದರ್ಶಿ ಬಿ.ಎಂ. ಕೇಶವ, ಉಪಾಧ್ಯಕ್ಷ ಎಂ.ಪಿ. ನಾಗರಾಜು, ಖಜಾಂಜಿ ರವಿಶಂಕರ್, ಸಹಕಾರ್ಯದರ್ಶಿ ಅಚ್ಚಾಂಡಿರ ಪವನ್ ಪೆಮ್ಮಯ್ಯ, ಕ್ರೀಡಾ ಕಾರ್ಯದರ್ಶಿ ದುಗ್ಗಳ ಕಪಿಲ್ ಕುಮಾರ್ ಇದ್ದರು.