ಮಡಿಕೇರಿ, ನ. ೨೫: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ೩ನೇ ರಾಜ್ಯಮಟ್ಟದ ಸಮ್ಮೇಳನ ಡಿಸೆಂಬರ್ ೨೯ರಿಂದ ಎರಡು ದಿನಗಳ ಕಾಲ ರಾಯಚೂರು ಜಿಲ್ಲೆಯ ಲಿಂಗಸೂರಿನಲ್ಲಿ ನಡೆಯಲಿದೆ ಎಂದು ಪರಿಷತ್ತಿನ ಕೊಡಗು ಜಿಲ್ಲಾ ಅಧ್ಯಕೆÀ್ಷ ವನಿತಾ ಚಂದ್ರಮೋಹನ್ ತಿಳಿಸಿದ್ದಾರೆ.
ಎರಡು ದಿನಗಳ ಕಾಲ ನಡೆಯಲಿರುವ ಸಮ್ಮೇಳನದಲ್ಲಿ ಹಲವು ವಿಭಿನ್ನ ಗೋಷ್ಠಿಗಳು, ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ. ಸಮ್ಮೇಳನದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರತಿ ಜಿಲ್ಲೆಗೆ ಒಬ್ಬರಂತೆ ರಾಜ್ಯದ ೩೫ ಶೈಕ್ಷಣಿಕ ಜಿಲ್ಲೆಗಳಿಂದ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷÀ ಡಾ. ಹುಲಿಕಲ್ ನಟರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಲೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ ಶಿಕ್ಷಣ, ವಿಜ್ಞಾನ ಪರಿಸರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಕೊಡಗು ಜಿಲ್ಲೆಯ ಸಾಧಕರನ್ನು ಸೂಚಿಸುವಂತೆ ಅವರು ಕೋರಿದ್ದು, ಸಾಧಕರ ವಿವರಗಳನ್ನು ತಾ. ೨೯ರ ಒಳಗೆ ವನಿತಾ ಚಂದ್ರಮೋಹನ್, ಅಧ್ಯಕ್ಷರು, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್, ಕೊಡಗು ಜಿಲ್ಲೆ, ಅಂಚೆಪಟ್ಟಿಗೆ ಸಂಖ್ಯೆ ೫೬, ಕುಶಾಲನಗರ.೫೭೧೨೩೪. ವಿಳಾಸಕ್ಕೆ ಕಳುಹಿಸಿ ಕೊಡುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.