ವರದಿ ಚಂದ್ರಮೋಹನ್
ಕುಶಾಲನಗರ, ನ. ೨೪: ಮೈಸೂರು - ಕುಶಾಲನಗರ ರಾಷ್ಟಿçÃಯ ಹೆದ್ದಾರಿ ನಾಲ್ಕು ಪಥ ಹಾಗೂ ಆರು ಪಥಗಳ ರಸ್ತೆ ಅಗಲೀಕರಣ ಅಭಿವೃದ್ಧಿ ಕಾಮಗಾರಿ ೨೦೨೪ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಕೊಡಗು ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಹೇಳಿದ್ದಾರೆ.
ಅವರು ಕುಶಾಲನಗರ ಸಮೀಪದ ಹೇರೂರು ಹಾದ್ರೆ ಗ್ರಾಮದಲ್ಲಿ ಬಿಎಸ್ಎನ್ಎಲ್ ೪ಜಿ ಗೋಪುರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ನಂತರ ನಡೆದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೈಸೂರಿನಿಂದ ಕುಶಾಲನಗರ ತನಕ ನಡೆಯಲಿರುವ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಈಗಾಗಲೇ ಕೆಲವು ಕೇಂದ್ರಗಳಲ್ಲಿ ಕಾಮಗಾರಿಗೆ ಅವಶ್ಯಕತೆ ಇರುವ ಯಂತ್ರೋಪಕರಣಗಳನ್ನು ಒದಗಿಸಿದ್ದು, ಪ್ರಾಥಮಿಕ ಕಾಮಗಾರಿ ಗಳು ನಡೆಯುತ್ತಿವೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿAದ ಅನುಮತಿ ಬಾಕಿ ಇದ್ದು ಸದ್ಯದಲ್ಲಿಯೇ ಹುಣಸೂರಿನಲ್ಲಿ ಈ ಸಂಬAಧ ಸಭೆ ನಡೆಯಲಿದೆ. ಹೆದ್ದಾರಿ ರಸ್ತೆ ನಿರ್ಮಾಣ ನಂತರ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಲವು ಪ್ರದೇಶಗಳು ಅಭಿವೃದ್ಧಿಗೊಳ್ಳಲಿವೆ ಎಂದರು. ಸಂಪರ್ಕ ವ್ಯವಸ್ಥೆ ಮೂಲಕ ಹೆಚ್ಚಿನ ಕೈಗಾರಿಕೋದ್ಯಮಗಳು ಸ್ಥಾಪನೆಗೊಳ್ಳಲು ಅವಕಾಶ ಲಭ್ಯ ವಾಗಲಿದೆ ಎಂದ ಅವರು, ಇದ ರೊಂದಿಗೆ ಕೊಡಗು ಜಿಲ್ಲೆಯಲ್ಲಿ ದೂರ ಸಂಪರ್ಕ ವ್ಯವಸ್ಥೆ ಇನ್ನಷ್ಟು ಮೇಲ್ದರ್ಜೆ ಗೇರಲಿದೆ.
(ಮೊದಲ ಪುಟದಿಂದ) ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ೬೩ ನೂತನ ಬಿಎಸ್ಎನ್ಎಲ್ ಮೊಬೈಲ್ ಟವರ್ಗಳು ನಿರ್ಮಾಣಗೊಳ್ಳಲಿವೆ ಎಂದು ಮಾಹಿತಿ ನೀಡಿದರು. ೧೯೫೪ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೈಸೂರು- ಕುಶಾಲನಗರ ರೈಲ್ವೆ ಯೋಜನೆ ಚಾಲನೆಯಲ್ಲಿದ್ದು ರಾಜ್ಯ ಸರ್ಕಾರದ ಅಸಹಕಾರ ಧೋರಣೆ ವಿಳಂಬಕ್ಕೆ ಕಾರಣವಾಗಿದೆ ಎಂದರು.
ರಾಜ್ಯ ಸರ್ಕಾರದ ಬಹುತೇಕ ಯೋಜನೆಗಳು ರಾಜ್ಯದಲ್ಲಿ ಅನುಷ್ಠಾನಗೊಳ್ಳುವಲ್ಲಿ ವಿಫಲಗೊಳ್ಳುತ್ತಿದ್ದು, ಸಾವಿರಾರು ಕೋಟಿ ರೂಗಳ ಯೋಜನೆಗಳು ನೆರೆಯ ತೆಲಂಗಾಣ ರಾಜ್ಯಕ್ಕೆ ವರ್ಗಾವಣೆ ಆಗಿರೋ ಬಗ್ಗೆ ಮಾಹಿತಿ ಒದಗಿಸಿದರು.
ದೇಶದ ಮುಂದಿನ ಭವಿಷ್ಯದ ಬಗ್ಗೆ ಚಿಂತಿಸಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕಿದೆ ಎಂದ ಸಂಸದರು, ಮಕ್ಕಳ ಭವಿಷ್ಯವನ್ನು ಚಿಂತಿಸುವುದರೊAದಿಗೆ ರಾಜ್ಯದಲ್ಲಿ ಈ ಬಾರಿ ಮಾಡಿದ ತಪ್ಪನ್ನು ಮತ್ತೆ ಮಾಡಬಾರದು ಎಂದು ಅವರು ಕೋರಿದರು.
ಈ ಸಂದರ್ಭ ಮಾಜಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಮನು ಕುಮಾರ್ ರೈ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಗನ್ನಾಥ್, ಉಪಾಧ್ಯಕ್ಷ ಬಿ.ಇ. ಸತೀಶ್, ಅರುಣ ಕುಮಾರಿ, ತೆಕ್ಕಡೆ ಸಂಜು, ಚರಣ್, ಅಂಬೆಕಲ್ ಚಂದ್ರು ಮತ್ತಿತರರು ಇದ್ದರು.