ಮಡಿಕೇರಿ, ನ. ೨೪ :ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ೯ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಧನುಶ್ರೀ ವಿ. ಶ್ರೀ ಕುಮಾರಲಿಂಗೇಶ್ವರ ಪ್ರೌಢಶಾಲೆ ಶಾಂತಹಳ್ಳಿ ಇಲ್ಲಿ ನಡೆದ ಜಿಲ್ಲಾಮಟ್ಟದ ಯುವಜನೋತ್ಸವದ ಜನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈಕೆ ಮಡಿಕೇರಿಯ ಪುಟಾಣಿ ನಗರದ ನಿವಾಸಿ ವೇಣುಗೋಪಾಲ್, ಹಾಗೂ ವಿನುತ ದಂಪತಿ ಪುತ್ರಿ.