ಮಡಿಕೇರಿ, ನ. ೨೪: ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲೆ ವಿಭಾಗ ಮತ್ತು ಪದವಿಪೂರ್ವ ವಿಭಾಗದಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಬಹುಮಾನಕ್ಕೆ ಭಾಜನರಾಗಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು, ಪದವಿ / ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿಯವರ ೧೫೪ನೇ ಜಯಂತಿ ಅಂಗವಾಗಿ ಸ್ಪರ್ಧೆ ಆಯೋಜಿಸಲಾಗಿತ್ತು.
ಪ್ರೌಢಶಾಲೆ ವಿಭಾಗದಲ್ಲಿ ವೀರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ ಅನಿರುದ್ಧ ಮನೋಜ್ ಪ್ರಥಮ, ಪದವಿಪೂರ್ವ ವಿಭಾಗದಲ್ಲಿ ಮಡಿಕೇರಿ ಸಂತ ಮೈಕಲರ ಕಾಲೇಜಿನ ಹೃತ್ಪೂರ್ವಕ್ ಕೆ.ಎಸ್. ಪ್ರಥಮ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.