ಕುಶಾಲನಗರ, ನ. ೨೪: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರೂ ತಮ್ಮ ಪ್ರತಿಭೆಗಳ ಮೂಲಕ ಜೀವನದ ಗುರಿ ಸಾಧಿಸಲು ಪಣ ತೊಡಬೇಕಾದ ಅಗತ್ಯತೆ ಇದೆ ಎಂದು ಉದ್ಯಮಿ ಎಸ್ ಎಲ್ ಎನ್ ವಿಶ್ವನಾಥನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ಕಲಾರಂಭ್ -೨೦೨೩ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಮರ್ಪಕ ಶಿಕ್ಷಣ ಪಡೆಯುವುದರೊಂದಿಗೆ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ವಿವೇಕಾನAದ ಕಾಲೇಜು ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಅಂರ‍್ರಾಷ್ಟಿçÃಯ ಸೆಸ್ಟೋಬಾಲ್ ಕ್ರೀಡಾಪಟು ಇರ್ಷಾದ್ ಮತ್ತು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿಷ್ಣು ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಉದ್ಯಮಿ ಎಸ್ ಎಲ್ ಎನ್ ವಿಶ್ವನಾಥನ್ ಅವರನ್ನು ಸನ್ಮಾನಿಸಲಾಯಿತು.
ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೈಬರಹ ಸ್ಪರ್ಧೆ, ವಸ್ತç ವಿನ್ಯಾಸ, ನೃತ್ಯ ಸ್ಪರ್ಧೆ, ಚರ್ಚಾ ಸ್ಪರ್ಧೆ ಮತ್ತಿತರ ವಿಶೇಷ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ ನಾಗೇಶ್, ಎಂಜಿಎA ಪದವಿ ಕಾಲೇಜಿನ ಪ್ರಾಂಶುಪಾಲ ಟ.ಎ. ಲಿಖಿತ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕ್ಲಾರಾ ರೇಷ್ಮಾ, ಕಚೇರಿ ಅಧೀಕ್ಷಕ ನಂಜಪ್ಪ, ಸಂಸ್ಥೆಯ ಆಡಳಿತ ಅಧಿಕಾರಿ ಮಹೇಶ್ ಅಮೀನ್ ಮತ್ತಿತರರು ಇದ್ದರು.