ಸೋಮವಾರಪೇಟೆ, ನ. ೨೫: ಇಂದು ಸ್ತಿçÃಶಕ್ತಿ ಸಂಘಗಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವುದರೊಂದಿಗೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಮಲ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ತಾಲೂಕು ಸ್ತಿçÃಶಕ್ತಿ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು ಇಲ್ಲಿನ ಸ್ತಿçÃಶಕ್ತಿ ಭವನದಲ್ಲಿ ಎರಡು ದಿನಗಳ ಕಾಲ ಸ್ತಿçÃಶಕ್ತಿ ಗುಂಪುಗಳಿಗೆ ಆಯೋಜಿಸಲಾಗಿರುವ ಪ್ಯಾಕಿಂಗ್, ಲೇಬಲ್ಲಿಂಗ್, ಸಾವಯವ ಉತ್ಪನ್ನ, ಡಿಜಿಟಲ್ ಸಾಕ್ಷರತೆ ಮತ್ತು ಕೌಟುಂಬಿಕ ದೌರ್ಜನ್ಯ ಸಂರಕ್ಷಣಾ ಕಾಯ್ದೆ ಬಗ್ಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಲಾಖೆಯ ಸಹಕಾರದಿಂದ ಎಲ್ಲಾ ಕಾರ್ಯಕ್ರಮಗಳನ್ನು ಸಂಘದ ಸದಸ್ಯರಿಗೆ ತಲುಪಿಸುತ್ತಿದ್ದಾರೆ ಎಂದರು. ಬ್ಯಾಂಕಿAಗ್ ಕ್ಷೇತ್ರದ ಕಾರ್ಯ ಚಟುವಟಿಕೆಗಳ ಕುರಿತು ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ವ್ಯವಸ್ಥಾಪಕ ಪ್ರದೀಪ್ ಕುಮಾರ್ ಮಾಹಿತಿ ನೀಡಿದರು. ಮಾರುಕಟ್ಟೆ ವ್ಯವಸ್ಥೆ, ಉದ್ಯಮಶೀಲತೆ ಕುರಿತು ಜಿಲ್ಲಾ ತರಬೇತಿ ಕೇಂದ್ರದ ಉಪನ್ಯಾಸಕ ಹರೀಶ್ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸ್ತಿçÃಶಕ್ತಿ ಒಕ್ಕೂಟದ ರಾಜ್ಯಾಧ್ಯಕ್ಷೆ ರೆಹನಾ ಫಿರೋಜ್, ಸಂಪನ್ಮೂಲ ವ್ಯಕ್ತಿ ಜಿಲ್ಲಾ ತರಬೇತಿ ಕೇಂದ್ರದ ಕುಮಾರ್, ಕೃಷಿ ಇಲಾಖೆಯ ಅಧಿಕಾರಿ ಶಾರದಾ, ಸ್ತಿçÃಶಕ್ತಿ ಬ್ಲಾಕ್ ಸೊಸೈಟಿ ತಾಲೂಕು ಅಧ್ಯಕ್ಷೆ ಸುಮತಿ ಮತ್ತಿತರರು ಇದ್ದರು.