ಮಡಿಕೇರಿ, ನ. ೨೫: ಕೊಡಗು ಜಿಲ್ಲೆಯಲ್ಲಿ ‘ನಮ್ಮ ಕ್ಲಿನಿಕ್’ ನ್ನು ಸ್ಥಾಪಿಸಲಾಗಿದ್ದು, ನಮ್ಮ ಕ್ಲಿನಿಕ್‌ನ ಉದ್ಘಾಟನೆಯು ನವೆಂಬರ್ ೨೭ ರಂದು ಬೆಳಿಗ್ಗೆ ೯ ಗಂಟೆಗೆ ಕುಶಾಲನಗರದ ಬಿ.ಎಂ.ರಸ್ತೆಯ ಎಚ್‌ಡಿಎಫ್‌ಸಿ ಬ್ಯಾಂಕ್ ಎದುರು ‘ನಮ್ಮ ಕ್ಲಿನಿಕ್’ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.