ಶನಿವಾರಸAತೆ, ನ. ೨೬: ಕನ್ನಡ ಸಾಹಿತ್ಯ ಪರಿಷತ್ ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ, ಕನ್ನಡ ಭವನ ಉದ್ಘಾಟನೆ ಹಾಗೂ ಪುಟ್ಟಸ್ವಾಮಿ ದತ್ತಿ ನಿಧಿ ಸಮಾರಂಭ ತಾ.೨೯ರಂದು ಮಧ್ಯಾಹ್ನ ೨.೩೦ ಕ್ಕೆ ಕನ್ನಡ ಭವನದಲ್ಲಿ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಹೋಬಳಿ ಘಟಕದ ಅಧ್ಯಕ್ಷ ಬಿ.ಬಿ.ನಾಗರಾಜ್ ವಹಿಸಲಿದ್ದು, ಕನ್ನಡ ಭವನವನ್ನು ಕಸಾಪ ತಾಲೂಕು ಘಟಕದ ಅಧ್ಯಕ್ಷ ಎಸ್.ಡಿ.ವಿಜೇತ್ ಉದ್ಘಾಟಿಸಲಿದ್ದಾರೆ. ಕೊಡ್ಲಿಪೇಟೆ ಪದವಿ ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ದತ್ತಿ ನಿಧಿ ಪ್ರಾಯೋಜಕ ಎಸ್.ಪಿ. ಪ್ರಸನ್ನ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್, ಉಪ ತಹಶೀಲ್ದಾರ್ ನಾಗರಾಜ್, ವಾಣಿಜ್ಯೋದ್ಯಮಿಗಳ ಸಂಘದ ಅಧ್ಯಕ್ಷ ಸರ್ದಾರ್ ಅಹಮ್ಮದ್ ಮತ್ತಿತರರು ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ ೧೧ ಗಂಟೆಗೆ ಕನ್ನಡ ಭವನದಲ್ಲಿ ಸ್ಥಳೀಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ನಾಡಗೀತೆ ಸ್ಪರ್ಧೆ ನಡೆಯಲಿದೆ.