ನಾಪೋಕ್ಲು, ನ. ೨೬: ಸಮೀಪದ ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಹುತ್ತರಿಗೆ ಮುನ್ನಾ ದಿನವಾದ ಭಾನುವಾರ ವಾರ್ಷಿಕ ಕುಂಬ್ಯಾರ್ ಕಲಾಡ್ಚ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತುಪೋರಾಟ ದೊಂದಿಗೆ ದೇವಾಲಯಕ್ಕೆ ತಲುಪಿ ಎತ್ತುಪೋರಾಟವನ್ನು ಒಪ್ಪಿಸಲಾಯಿತು. ನಂತರ ಭಕ್ತಾದಿಗಳಿಂದ ತುಲಾಭಾರ ಸೇವೆ ಸೇರಿದಂತೆ ಇನ್ನಿತರ ಪೂಜೆಗಳನ್ನು ನೆರವೇರಿಸಿದ ಬಳಿಕ ಮಹಾಪೂಜೆ ನಡೆದು, ತೀರ್ಥ ಪ್ರಸಾದ, ಅನ್ನಸಂತರ್ಪಣೆ ನೆರವೇರಿತು.

ನಂತರ ದೇವರ ಪ್ರಾರ್ಥನೆಯ ಬಳಿಕ ದೇವರ ನೃತ್ಯಬಲಿ ಜರುಗಿ ಎತ್ತುಪೋರಾಟದೊಂದಿಗೆ ತಕ್ಕ ಮುಖ್ಯಸ್ಥರು ಭಕ್ತಾದಿಗಳು ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ತೆರಳಿದರು. ಇದೇ ಸಂದರ್ಭ ಪೇರೂರು ಹಾಗೂ ನೆಲಜಿ ಗ್ರಾಮದ ತಕ್ಕ ಮುಖ್ಯಸ್ಥರು ಎತ್ತುಪೋರಾಟ ದೊಂದಿಗೆ ಮಲ್ಮಕ್ಕೆ ಆಗಮಿಸಿದರು. ಅರ್ಚಕರು ಶುದ್ಧಕಲಶ ಪೂಜಾ ಕಾರ್ಯಗಳನ್ನು ನೆರವೇರಿಸಿ ಎತ್ತುಪೋರಾಟ ದುಡಿಕೊಟ್ಟ್ ಪಾಟ್ ನೆರವೇರಿತು. ಬಳಿಕ ಎತ್ತುಪೋರಾಟದ ಅಕ್ಕಿಯನ್ನು ಮೂರು ಭಾಗಮಾಡಿ ನೆಲಜಿ, ಪೇರೂರು ಹಾಗೂ ಪಾಡಿ ದೇವಾಲಯದ ತಕ್ಕಮುಖ್ಯಸ್ಥರು ಹಂಚಿಕೊAಡು ದೇವರ ಕಟ್ಟು ಸಡಿಲಿಸಿ ನಾಡಿನ ಸುಭೀಕ್ಷಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಸಂಜೆ ದೇವಾಲಯ ದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಕಲಾಡ್ಚ ಸಂಭ್ರಮದಿAದ ಜರುಗಿತು. ಈ ಸಂದರ್ಭ ನಾಡಿನ ಮತ್ತು ದೇವಾಲಯದ ೧೩ ತಕ್ಕ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಕ್ತಾದಿಗಳು, ಪಾಲ್ಗೊಂಡಿದ್ದರು.

ಸಮೀಪದ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಇದೇ ರೀತಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವ ವಿಜೃಂಭಣೆಯಿAದ ನಡೆಯಿತು.

-ದುಗ್ಗಳ ಸದಾನಂದ