ಪೊನ್ನಂಪೇಟೆ, ನ. ೨೬: ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈಪ್ಲೆöÊಯರ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ವೀರಾಜಪೇಟೆ ತಾಲೂಕಿನ ೩ ನಾಡುಗಳ ವ್ಯಾಪ್ತಿಯ ಕೊಡವ ಕೌಟುಂಬಿಕ ೨ನೇ ವರ್ಷದ ಹಾಕಿ ಪಂದ್ಯಾವಳಿ ‘ಹೈಪ್ಲೆöÊಯರ್ಸ್ ಕಪ್-೨೦೨೩' ತಾ. ೨೮ ರಿಂದ ಆರಂಭಗೊಳ್ಳಲಿದೆ. ವಿ. ಬಾಡಗದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು ೫ ದಿನಗಳ ಕಾಲ ನಡೆಯಲಿರುವ ಈ ಹಾಕಿ ಪಂದ್ಯಾವಳಿಗಾಗಿ ಭರದ ಸಿದ್ಧತೆಗಳು ನಡೆಯುತ್ತಿದೆ.
ವೀರಾಜಪೇಟೆ ತಾಲೂಕಿನ ಬೇರಳಿನಾಡು, ಕುತ್ತುನಾಡು ಮತ್ತು ಬೊಟ್ಟಿಯತ್ ನಾಡು ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬ ತಂಡಗಳಿಗಾಗಿ ಆಯೋಜಿಸಲಾಗಿರುವ ಈ ಹಾಕಿ ಪಂದ್ಯಾ ವಳಿಯು ವಿ. ಬಾಡಗ ಗ್ರಾಮದಲ್ಲಿ ೨ನೇ ಬಾರಿಗೆ ನಡೆಯುತ್ತಿದ್ದು, ಇದಕ್ಕಾಗಿ ಗ್ರಾಮದ ಯುವಕರು ಉತ್ಸಾಹದಿಂದ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ. ಹಾಕಿ ಕೂರ್ಗ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ ಕೌಟುಂಬಿಕ ಹಾಕಿ ಪಂದ್ಯಾವಳಿಯು ಹಾಕಿ ಕರ್ನಾಟಕ ಸಂಸ್ಥೆಯ ನಿಯಮಾವಳಿಗೆ ಬದ್ಧವಾಗಿ ನಾಕ್ ಔಟ್ ಮಾದರಿಯಲ್ಲಿ ನಡೆಯಲಿದ್ದು, ಈಗಾಗಲೇ ೧೯ ಕೊಡವ ಕುಟುಂಬ ಹಾಕಿ ತಂಡಗಳು ತಮ್ಮ ಹೆಸರು ನೋಂದಾಯಿಸಿಕೊAಡಿವೆ. ಪಂದ್ಯಾವಳಿಯು ಸಂಪೂರ್ಣ ವಾಗಿ ದಾನಿಗಳ ನೆರವಿನಿಂದಲೇ ಆಯೋಜನೆಗೊಂಡಿದೆ. ಈ ಪಂದ್ಯಾವಳಿಯ ನೆಪದಲ್ಲಿ ತೀರಾ ದುಸ್ಥಿತಿಯಲ್ಲಿದ್ದ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಮೈದಾನವನ್ನು ಲಕ್ಷಾಂತರ ಮೊತ್ತದ ಹಣ ವಿನಿಯೋಗಿಸಿ ಅಭಿವೃದ್ಧಿ ಪಡಿಸಲಾಗಿದೆ. ವಿ. ಬಾಡಗ ಹೈಪ್ಲೆöÊಯರ್ಸ್ ಸಂಸ್ಥೆಯ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ಮೈದಾನದ ಸಿದ್ಧತೆ ಕೆಲಸ ನಡೆಯುತ್ತಿದ್ದು, ಮೈದಾನವನ್ನು ಹಾಕಿ ಪಂದ್ಯಾವಳಿಗಾಗಿ ಪೂರ್ಣರೂಪದಲ್ಲಿ ಸಜ್ಜುಗೊಳಿಸಲಾಗಿದೆ ಎಂದು ಕ್ರೀಡಾ ಸಮಿತಿಯ ಅಧ್ಯಕ್ಷರಾಗಿರುವ ಕುಪ್ಪಂಡ ದಿಲನ್ ಬೋಪಣ್ಣ ತಿಳಿಸಿದ್ದಾರೆ.
ಪಂದ್ಯಾವಳಿಯ ಟೈಸ್ ಅನ್ನು ಅಂತಿಮಗೊಳಿಸಲಾಗಿದೆ. ಹಾಗೆ ತಾಂತ್ರಿಕ ಸಮಿತಿ ಕೂಡ ಸಿದ್ಧಗೊಂಡಿದೆ ಎಂದು ಮಾಹಿತಿ ನೀಡಿರುವ ಪಂದ್ಯಾವಳಿಯ ತಾಂತ್ರಿಕ ಸಮಿತಿಯ ನಿರ್ದೇಶಕ ದಿಲನ್ ಬೋಪಣ್ಣ, ಪಂದ್ಯಾವಳಿ ಯಶಸ್ವಿ ಗಾಗಿ ಕಳೆದ ಬಾರಿಯಂತೆ ಇಡೀ ಗ್ರಾಮಸ್ಥರು ಕೈಜೋಡಿಸಿದ್ದು, ಈ ಬಾರಿಯ ಪಂದ್ಯಾವಳಿಗೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.
ವರದಿ : ರಫೀಕ್ ತೂಚಮಕೇರಿ