*ಗೋಣಿಕೊಪ್ಪ, ನ. ೨೫: ಕರ್ನಾಟಕ ಸುವರ್ಣ ಸಂಭ್ರಮ ಪ್ರಯುಕ್ತ ಗೋಣಿಕೊಪ್ಪ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ವತಿಯಿಂದ ತಾ.೨೯ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಜಿಮ್ಮ ಸುಬ್ಬಯ್ಯ ತಿಳಿಸಿದ್ದಾರೆ.

ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ವಿಶೇಷ ವೇದಿಕೆ ನಿರ್ಮಿಸಿ ಕಾರ್ಯಕ್ರಮ ನಡೆಸಲಾಗುವುದು. ಬೆಳಿಗ್ಗೆ ಮೆರವಣಿಗೆ ಕಾರ್ಯಕ್ರಮ, ಅನ್ನದಾನ ನಡೆಯಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಳಿಗ್ಗೆ ೯.೩೦ ಗಂಟೆಗೆ ಆರ್‌ಎಂಸಿ ಆವರಣದಿಂದ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಯಲಿದೆ. ಕನ್ನಡಾಂಭೆ ನಿರ್ಮಿಸಿ ಕಾರ್ಯಕ್ರಮ ನಡೆಸಲಾಗುವುದು. ಬೆಳಿಗ್ಗೆ ಮೆರವಣಿಗೆ ಕಾರ್ಯಕ್ರಮ, ಅನ್ನದಾನ ನಡೆಯಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಳಿಗ್ಗೆ ೯.೩೦ ಗಂಟೆಗೆ ಆರ್‌ಎಂಸಿ ಆವರಣದಿಂದ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಯಲಿದೆ. ಕನ್ನಡಾಂಭೆ ತೇರು, ಡೊಳ್ಳು ಕುಣಿತ, ಛದ್ಮವೇಷ, ವೀರಗಾಸೆ, ಎತ್ತಿನ ಗಾಡಿ, ವಿವಿಧ ಕಲಾ ತಂಡಗಳು ಭಾಗವಹಿಸಲಿವೆ. ಮಧ್ಯಾಹ್ನ ೨ ಸಾವಿರ ಜನರಿಗೆ ಅನ್ನದಾನದ ವ್ಯವಸ್ಥೆ ಮಾಡಲಾಗಿದೆ. ಸಂಜೆ ೭ ಗಂಟೆಯಿAದ ರಾತ್ರಿ ೧೧ ಗಂಟೆವರೆಗೆ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಗೋಷ್ಠಿಯಲ್ಲಿ ಕಾರ್ಯಕ್ರಮ ಅಧ್ಯಕ್ಷ ಕೆ.ವೈ. ಅಶ್ವತ್, ಸಂಘದ ಕಾರ್ಯದರ್ಶಿ ಕೆ.ಬಿ. ಸುರೇಶ್, ಸಹ ಕಾರ್ಯದರ್ಶಿ ರಾಜ, ಖಜಾಂಚಿ ಬಿ.ಪಿ. ರಂಜು ಇದ್ದರು.