ಮಡಿಕೇರಿ, ನ. ೨೮: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಸಂಸದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ತಾ. ೨೯ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ. ಸಿಇಓ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ.