ಕುಶಾಲನಗರ, ನ. ೨೮: ನಮ್ಮ ಕ್ಲಿನಿಕ್ ಸೌಲಭ್ಯವನ್ನು ಸಾರ್ವಜನಿಕರು ಸದು ಪಯೋಗಪಡಿಸಿಕೊಳ್ಳುವಂತೆ ಶಾಸಕ ಡಾ. ಮಂಥರ್ ಗೌಡ ಕರೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬಿ.ಎಂ. ರಸ್ತೆಯಲ್ಲಿ ಆರಂಭಿಸಿರುವ ನಮ್ಮ ಕ್ಲಿನಿಕ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಕ್ಲಿನಿಕ್ ಆರಂಭಿಸಿರುವ ಕಾರಣ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳ ಒತ್ತಡ ನಿವಾರಣೆಯಾಗಲಿದೆ. ನುರಿತ ವೈದ್ಯ, ತಾಂತ್ರಿಕ ಸಿಬ್ಬಂದಿಗಳು ಲಭ್ಯವಿದ್ದು ಡೇ ಕ್ಲಿನಿಕ್ ಮಾದರಿಯ ಸೌಲಭ್ಯವನ್ನು ಸಾರ್ವಜನಿಕರಿಗೆ ಬೆಳಗ್ಗೆ ೯.೩೦ ರಿಂದ ಸಂಜೆ ೪.೩೦ ರ ತನಕ ಪಡೆದುಕೊಳ್ಳುವ ಅವಕಾಶವಿದೆ ಎಂದರು.

ಮಡಿಕೇರಿಯಲ್ಲಿ ಕೂಡ ನಮ್ಮ ಕ್ಲಿನಿಕ್ ಸ್ಥಾಪನೆಗೆ ಕ್ರಮವಹಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿದರು. ಈ ಸಂದರ್ಭ ಕುಶಾಲನಗರ ಪುರಸಭೆ ಉಪಾಧ್ಯಕ್ಷೆ ಸುರಯ್ಯ ಭಾನು, ಸದಸ್ಯರಾದ ಎಂ.ಕೆ. ದಿನೇಶ್, ಎಂ.ಬಿ. ಸುರೇಶ್, ಶೇಖ್ ಖಲೀಮುಲ್ಲಾ, ಜಯಲಕ್ಷಿö್ಮ, ಪುಟ್ಟಲಕ್ಷಿö್ಮ, ಕುಡಾ ೆಮಾಜಿ ಅಧ್ಯಕ್ಷ ಮಂಜುನಾಥ್ ಗುಂಡುರಾವ್, ಜಿ.ಪಂ. ಮಾಜಿ ಸದಸ್ಯೆ ಸುನಿತಾ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಶಿವಶಂಕರ್, ಕಿರಣ್, ಜೋಸೆಫ್ ವಿಕ್ಟರ್ ಸೋನ್ಸ್, ನಟೇಶ್ ಗೌಡ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮತ್ತಿತರರು ಇದ್ದರು.