ಕೊಡ್ಲಿಪೇಟೆ, ನ. ೨೮: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವತಿಯಿಂದ ಮಕ್ಕಳ ಗ್ರಾಮ ಸಭೆಯನ್ನು ಬ್ಯಾಡಗೊಟ್ಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಹನೀಫ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ತಮ್ಮ ಶಾಲೆ ಹಾಗೂ ಗ್ರಾಮದ ಹಲವಷ್ಟು ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದರು.
ಪAಚಾಯಿತಿ ವ್ಯಾಪ್ತಿಯ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಶಾಲೆಗೆ ಬೇಕಾದ ಮೂಲಭೂತ ಸೌಕರ್ಯಗಳು, ಗ್ರಂಥಾಲಯ, ಗ್ರಾಮೀಣ ಪ್ರದೇಶದ ರಸ್ತೆಗಳ ಅವ್ಯವಸ್ಥೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು.
ಈ ಸಂದರ್ಭ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನೀಫ್, ಗ್ರಾಮ ಪಂಚಾಯಿತಿ ಇತಿಮಿತಿ ಯೊಳಗೆ ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಹೆಚ್ಚಿನ ಕೆಲಸ ಕಾರ್ಯಗಳ ಬಗ್ಗೆ ಸಂಬAಧಪಟ್ಟ ಇಲಾಖೆ ಹಾಗೂ ಶಾಸಕರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಸಭೆಯಲ್ಲಿ ಉಪಾಧ್ಯಕ್ಷೆ ದಾಕ್ಷಾಯಿಣಿ, ಸದಸ್ಯರಾದ ದಿನೇಶ್ ಕುಮಾರ್, ದೊಡ್ಡಯ್ಯ, ಪಾವನ, ಶಿಕ್ಷಣ ಇಲಾಖೆ ಸಿಆರ್ಪಿ ರವೀಶ್, ಆರೋಗ್ಯ ಇಲಾಖೆಯ ರಕ್ಷಿತ್, ಮುಖ್ಯ ಶಿಕ್ಷಕರಾದ ಭಾಗ್ಯ, ಮೂರ್ತಿ, ರಾಧ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಿರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಕ್ಕಳ ಗ್ರಾಮ ಸಭೆಯ ನಂತರ ಬ್ಯಾಡಗೊಟ್ಟ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಶಾಲೆಯ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ನೃತ್ಯ ಪ್ರದರ್ಶನ ನೀಡಿದರು, ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.