ಮಡಿಕೇರಿ, ನ. ೨೮: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಿವಿಧ ಅಪರಾಧ ಪ್ರಕರಣಗಳ ಒಟ್ಟು ೨೧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಐಪಿಸಿ , ಚೆಕ್ ಬೌನ್ಸ್ , ಅಪಘಾತ, ಗಾಂಜಾ ಮಾರಾಟ, ಸೇವನೆ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಸುಮಾರು ೨೧ ವಾರೆಂಟ್ ಆಗಿರುವವರನ್ನು ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೆಳಿಗ್ಗೆ ೫ ಗಂಟೆಯಿAದಲೇ ಕಾರ್ಯಾಚರಣೆ ನಡೆಸಿ ಬಂಧಿಸಿ ಠಾಣೆಗೆ ಕರೆದೊಯ್ದು ಪೊಲೀಸ್ ವಾಹನ ಮೂಲಕವೇ ನ್ಯಾಯಾಧೀಶರ ಎದುರು ಹಾಜರುಪಡಿಸಿ ಮುಂದಿನ ಕ್ರಮಕೈಗೊಂಡರು.