ಮಡಿಕೇರಿ, ನ. ೨೮: ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳು, ಮದೆನಾಡು ಬಿಜಿಎಸ್ ಪಬ್ಲಿಕ್ ಸ್ಕೂಲ್ನಲ್ಲಿ ತಾ. ೨೯ರಂದು (ಇಂದು) ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಬೆಳಿಗ್ಗೆ ೧೦ ಗಂಟೆಗೆ ಮೈಸೂರು ಶ್ರೀ ಆದಿಚುಂಚನಗಿರಿ ಶಾಖಾಮಠದ ಕಾರ್ಯದರ್ಶಿ ಸೋಮೇಶ್ವರನಾಥ ಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಕೂಲ್ನ ಆಡಳಿತಾಧಿಕಾರಿ ಸಿಇಓ ಹರೀಶ್, ಶಕ್ತಿ ದಿನಪತ್ರಿಕೆ ಉಪಸಂಪಾದಕ ಕುಡೆಕಲ್ ಸಂತೋಷ್, ಸಿಆರ್ಪಿ ಶ್ರುತಿ, ಮದೆಮಹೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷ ಹುದೇರಿ ರಾಜೇಂದ್ರ ಅವರುಗಳು ಉಪಸ್ಥಿತರಿರುವರು.