ಗೋಣಿಕೊಪ್ಪಲು, ನ. ೨೮: ಗೋಣಿಕೊಪ್ಪ ಆಟೋ ಮಾಲೀಕರ, ಚಾಲಕರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ೧೮ ನೇ ವರ್ಷದ ಕನ್ನಡ ರಾಜ್ಯೋತ್ಸವ ತಾ. ೨೯ ರಂದು (ಇಂದು) ನಡೆಯಲಿದೆ. ಮುಂಜಾನೆಯಿAದಲೇ ಹಲವಾರು ಕಾರ್ಯಕ್ರಮ ಆಯೋಜನೆಗೊಂಡಿದ್ದು ನಗರದ ಆಟೋ ನಿಲ್ದಾಣ ಕನ್ನಡ ಬಾವುಟ ಹಾಗೂ ತೋರಣಗಳಿಂದ ಕಂಗೊಳಿಸುತ್ತಿವೆ.

ಬೆಳಿಗ್ಗೆ ೯.೩೦ ಗಂಟೆಗೆ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ೧೦ ಗಂಟೆಗೆ ನಗರದ ರಾಜಬೀದಿಯಲ್ಲಿ ಮೆರವಣಿಗೆ ನಡೆಯಲಿದ್ದು, ಕನ್ನಡಾಂಬೆ ತೇರು, ಡೊಳ್ಳು ಕುಣಿತ, ಛದ್ಮವೇಷ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಹಾಗೂ ಎತ್ತಿನ ಗಾಡಿ ಪಾಲ್ಗೊಳ್ಳಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದ್ದು, ಸಂಜೆ ಬಸ್ ನಿಲ್ದಾಣದಲ್ಲಿ ಬ್ರಹತ್ ವೇದಿಕೆಯಲ್ಲಿ ಖ್ಯಾತ ಗಾಯಕರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ರಾತ್ರಿ ೭.೩೦ ಗಂಟೆಗೆ ಸಂಘದ ಗೌರವ ಅಧ್ಯಕ್ಷ ಕೆ.ಪಿ.ಬೋಪಣ್ಣ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ತೇಜಸ್ವಿನಿ ಗೌಡ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಗೋಣಿಕೊಪ್ಪ ಗ್ರಾ.ಪಂ.ಅಧ್ಯಕ್ಷೆ ಮನ್ನಕ್ಕಮನೆ ಸೌಮ್ಯಬಾಲು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಕೆ.ಬೋಪಣ್ಣ, ಪ್ರಗತಿ ಆಟೋ ಸಂಘದ ಅಧ್ಯಕ್ಷ ಮಲ್ಲಂಡ ಪ್ರಕಾಶ್, ಸ್ಥಾಪಕ ಅಧ್ಯಕ್ಷ ಪಿ.ಎಸ್.ಲೋಕೇಶ್, ಆಟೋ ಸಂಘದ ಅಧ್ಯಕ್ಷರಾದ ಜಿಮ್ಮ ಸುಬ್ಬಯ್ಯ, ಕನ್ನಡ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಕೆ.ವೈ.ಅಶ್ವಥ್ ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ನಂತರ ಮೈಸೂರಿನ ಪ್ರಖ್ಯಾತ ಕಲಾವಿದರ ತಂಡದಿAದ ರಸ ಮಂಜರಿ ಕಾರ್ಯಕ್ರಮ ಜರುಗಲಿದೆ.