ಕರಿಕೆ, ನ. ೨೯: ಇಲ್ಲಿನ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಬಾಲಚಂದ್ರ ನಾಯರ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ನೂತನ ಕ್ರಿಯಾ ಯೋಜನೆ ಹಾಗೂ ೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತರುವ ಕುರಿತು ಚರ್ಚೆ ನಡೆಸಲಾಯಿತು. ೨೦೨೨-೨೩ನೇ ಸಾಲಿನಲ್ಲಿ ಅಂಬೇಡ್ಕರ್ ಹಾಗೂ ಬಸವ ವಸತಿ ಯೋಜನೆಗಳಡಿಯಲ್ಲಿನ ಕಾಮಗಾರಿಗಳ ಅನುಷ್ಠಾನ ಮಾಡಲು ಕ್ರಮ ವಹಿಸಲು ನಿರ್ಣಯಿಸಲಾಯಿತು.
ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಕುದುಪಜೆ ಕಲ್ಪನಾ ಜಗದೀಶ್, ಸದಸ್ಯರಾದ ಕೆ.ಎ. ನಾರಾಯಣ, ಪುರುಷೋತ್ತಮ, ದೇವದತ್ತ, ದೀಪಿಕಾ ಸೇರಿದಂತೆ ಇತರರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ.ಪಿ. ಗಣಪತಿ ಸ್ವಾಗತಿಸಿ, ಸರಕಾರದ ಆದೇಶಗಳನ್ನು ಹಾಗೂ ಗ್ರಾಮ ಪಂಚಾಯಿತಿಯಲ್ಲಿ ಅನುಷ್ಠಾನಕ್ಕೆ ತರಬಹುದಾದ ಯೋಜನೆಗಳನ್ನು ಸಭೆಗೆ ತಿಳಿಸಿದರು.