ಐಗೂರು, ನ. ೨೯: ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರಗಂದೂರು ಬಿ ಗ್ರಾಮದ ವಾರ್ಡ್ ಸಭೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಲೀಂ ಹೊಸತೋಟ ಅವರ ಅಧ್ಯಕ್ಷತೆಯಲ್ಲಿ ಹೊಸತೋಟ ಸಮುದಾಯ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಅವರು ಸ್ವಾಗತ ಭಾಷಣ ಮಾಡಿದರು. ನಂತರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ರಸ್ತೆ ನಿರ್ಮಾಣ, ಬೀದಿ ದೀಪ ಅಳವಡಿಕೆ, ಆಶ್ರಯ ಮನೆಗೆ ಸಹಾಯ ಕೋರಿ ಗ್ರಾಮಸ್ಥರು ಅರ್ಜಿ ಸಲ್ಲಿಸಿದರು.

ಅಹವಾಲು ಸ್ವೀಕರಿಸಿ ಮಾತನಾಡಿದ ಉಪಾಧ್ಯಕ್ಷ ಸಲೀಂ, ಅನುದಾನ ಲಭ್ಯತೆಯ ಪ್ರಕಾರ ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಪಂಚಾಯಿತಿ ಅಧ್ಯಕ್ಷೆ ಉಷಾ ಪಿ.ಟಿ., ಪಂಚಾಯಿತಿ ಸದಸ್ಯೆ ಉಷಾ ಕುಂಬಾರಬಾಣೆ ಮತ್ತು ಗ್ರಾಮಸ್ಥರು ಹಾಜರಿದ್ದರು.