ಪೊನ್ನಂಪೇಟೆ, ನ. ೨೯: ರಾಷ್ಟçದ ಸರ್ವೋಚ್ಚ ಕಾನೂನಾಗಿರುವ ನಮ್ಮ ದೇಶದ ಶ್ರೇಷ್ಠ ಸಂವಿಧಾನ ದಿಂದಾಗಿ ದಮನಿತರ, ಶೋಷಿತರ, ಹಿಂದುಳಿದ ವರ್ಗಗಳ, ಬಡವರ ಸೇರಿದಂತೆ ತಳ ಸಮುದಾಯ ಗಳ ಮೇಲೆ ನಾಗರಿಕತೆಯ ಬೆಳಕು ಬೀಳುವಂತಾಯಿತು. ಧ್ವನಿ ಇಲ್ಲದವರ ಧ್ವನಿಯಾಗಿರುವ ನಮ್ಮ ಸಂವಿಧಾನ ತಳ ಸಮುದಾಯಗಳಿಗೆ ಸಾಮಾಜಿಕ ಭದ್ರತೆ ಒದಗಿಸುವ ಪ್ರಮುಖ ಆಧಾರ ಸ್ತಂಭವಾಗಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ ಅಭಿಪ್ರಾಯಪಟ್ಟಿದ್ದಾರೆ.

ಸಂವಿಧಾನ ದಿನಾಚರಣೆಯ ಅಂಗವಾಗಿ ವೀರಾಜಪೇಟೆಯ ಕೆ.ಎಂ.ಎ. ಪ್ರಧಾನ ಕಚೇರಿ ಸಭಾಂಗಣದಲ್ಲಿ ಅಳವಡಿಸಲಾದ ಸಂವಿಧಾನದ ಪೀಠಿಕೆ ಫಲಕ ಅನಾವರಣಗೊಳಿಸಿ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ನಾಗರಿಕರ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ವ್ಯಾಖ್ಯಾನಿಸಿರುವ ನಮ್ಮ ಸಂವಿಧಾನ ಜಾತ್ಯಾತೀತತೆ ಮತ್ತು ಸಮಾನತೆಯನ್ನು ಪ್ರತಿಪಾದಿಸಿದೆ. ತಮ್ಮ ಶ್ರೇಷ್ಠ ಚಿಂತನೆಯ ಮೂಲಕ ತಳ ಸಮುದಾಯಗಳ ಉನ್ನತಿಗಾಗಿ ನೂರಾರು ವರ್ಷಗಳ ದೂರದೃಷ್ಟಿತ್ವದ ಸಂವಿಧಾನ ರೂಪಿಸಿದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ಇಂದಿಗೂ ಜನಮಾನಸದಲ್ಲಿ ಸ್ಥಾನ ಪಡೆದಿರುವುದು ಈ ಕಾರಣಕ್ಕಾಗಿಯೇ ಎಂದು ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಅಕ್ಕಳತಂಡ ಎಸ್ ಮೊಯ್ದು, ಹಿರಿಯ ನಿರ್ದೇಶಕರಾದ ಚಿಮ್ಮಿಚ್ಚಿರ ಕೆ. ಇಬ್ರಾಹಿಂ (ಉಮ್ಮಣಿ), ಪದಾಧಿಕಾರಿಗಳಾದ ಮಂಡೇAಡ ಎ. ಮೊಯ್ದು, ದುದ್ದಿಯಂಡ ಹೆಚ್. ಮೊಯ್ದು, ಕೋಳುಮಂಡ ರಫೀಕ್, ಆಲೀರ ಹೆಚ್. ಅಬ್ದುಲ್ ಲತೀಫ್, ಮಂದಮಾಡ ಮುನೀರ್ ಮೊದಲಾದವರು ಭಾಗವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್ ತೂಚಮಕೇರಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ನಿರ್ದೇಶಕರಾದ ಪುದಿಯತಂಡ ಹೆಚ್. ಷಂಶುದ್ದೀನ್ ವಂದಿಸಿದರು.