ಸೋಮವಾರಪೇಟೆ, ನ. ೩೦: ಸಮೀಪದ ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ದಿನದ ಅಂಗವಾಗಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಶಾಲೆಯ ಅಭಿವೃದ್ಧಿಗೆ ಕೈಜೋಡಿಸುತ್ತಿರುವ ಮಾಜಿ ಸೈನಿಕ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ್, ರೋಟರಿ ಸಂಸ್ಥೆಯ ವಸಂತ್ ಹಾಗೂ ಬಸವೇಶ್ವರ ಯುವಕ ಸಂಘದ ಸಚಿನ್ ಅವರುಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ದಿಲೀಪ್, ಮುಖ್ಯ ಶಿಕ್ಷಕಿ ಎಸ್ತೆಲಾ ಡಿಸಿಲ್ವಾ, ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ವಿಜೇತ್, ಸಮಾಜ ಸೇವಕ ರವಿಕುಮಾರ್, ನವೀನ್ ಕುಮಾರ್, ರಮೇಶ್, ಅರುಣ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.