ಪೊನ್ನಂಪೇಟೆ, ನ. ೩೦: ದಕ್ಷಿಣ ಕೊಡಗಿನಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿ ಮುಂದುವರೆದಿದ್ದು, ಪೊನ್ನಂಪೇಟೆ ತಾಲೂಕಿನ ಬೆಸಗೂರು ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ.

ಬೆಸಗೂರು ಗ್ರಾಮದ ಹೆಚ್.ಎಂ. ಗೋಪಾಲ ಎಂಬವರ ಹಸುವನ್ನು ಹುಲಿ ಕೊಂದು ಅರ್ಧ ಭಾಗವನ್ನು ತಿಂದು ಹಾಕಿದೆ.

ಕಳೆದ ಎರಡು ದಿನಗಳ ಹಿಂದೆ ಮೇಯಲು ಬಿಟ್ಟಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಸಮೀಪದ ತೋಟ ದಲ್ಲಿ ಇಂದು ಹಸುವಿನ ಕಳೇಬರ ಪತ್ತೆಯಾಗಿದೆ.

(ಮೊದಲ ಪುಟದಿಂದ) ಘಟನೆ ನಡೆದ ಸ್ಥಳಕ್ಕೆ ಪೊನ್ನಂಪೇಟೆ ವಲಯ ಅರಣ್ಯಾಧಿಕಾರಿ ಶಂಕರ್, ಉಪ ವಲಯ ಅರಣ್ಯಾಧಿಕಾರಿಗಳಾದ ದಿವಾಕರ್, ಸಚಿನ್, ಅರಣ್ಯ ರಕ್ಷಕ ಸಂಜಯ್ ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಹುಲಿ ಗುರುತು ಪತ್ತೆಗೆ ಕ್ಯಾಮರ ಅಳವಡಿಸಿದ್ದು, ಬೆಸಗೂರು ವ್ಯಾಪ್ತಿಯಲ್ಲಿ ಕೂಂಬಿAಗ್ ನಡೆಸುತ್ತಿದ್ದಾರೆ. ಕಳೆದ ೩ ದಿನಗಳ ಹಿಂದೆ ಸಮೀಪದ ಕೋಟೂರು ಗ್ರಾಮದಲ್ಲಿ ಒಂದು ಹಸುವನ್ನು ಹುಲಿ ಕೊಂದು ಹಾಕಿತ್ತು. ಅಲ್ಲಿಯೂ ಅರಣ್ಯ ಇಲಾಖೆಗೆ ಹುಲಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಇದರಿಂದ ಸುತ್ತ ಮುತ್ತಲ ಗ್ರಾಮಸ್ಥರು ಆತಂಕಗೊAಡಿದ್ದಾರೆ. ಹುಲಿ ಭಯದಿಂದ ತೋಟಗಳಲ್ಲಿ ಕೆಲಸ ನಿರ್ವಹಿಸಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಅರಣ್ಯ ಇಲಾಖೆ, ಕಾಡು ಬಿಟ್ಟು ನಾಡಿಗೆ ಬಂದಿರುವ ಹುಲಿಯನ್ನು ಹಿಡಿದು ಆತಂಕ ನಿವಾರಿಸುವಂತೆ ಹಾಗೂ ಹಸುವಿನ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

-ಚನ್ನನಾಯಕ