ಚೆಯ್ಯಂಡಾಣೆ, ನ. ೩೦: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ನರಿಯಂದಡ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಚೆಯ್ಯಂಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಡಿಸೆಂಬರ್ ೩ ರಂದು ನಡೆಯಲಿದೆ.

ಅಂದು ಬೆಳಿಗ್ಗೆ ೭ ಗಂಟೆಗೆ ಗಣಪತಿ ಹೋಮ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ೧೧.೩೦ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪೆಮ್ಮಂಡ ಕೌಶಿ ಕಾವೇರಮ್ಮ ವಹಿಸಲಿದ್ದಾರೆ.

ಉದ್ಘಾಟನೆ ಹಾಗೂ ಆಶೀರ್ವಚನವನ್ನು ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೆರವೇರಿಸಲಿದ್ದಾರೆ.