ಮಡಿಕೇರಿ, ನ. ೨೯: ಕಂದಾಯ ಇಲಾಖೆಯಿಂದ ಜನತೆಗೆ ಆಗಬೇಕಿರುವ ಕೆಲಸ ಕಾರ್ಯಗಳಿಗೆ ಸಂಬAಧಿಸಿದAತೆ ಸೂಕ್ತ ರೀತಿಯಲ್ಲಿ ಸ್ಪಂದಿಸುವAತೆ ತಹಶೀಲ್ದಾರ್ಗಳಿಗೆ ಸಂಸದ ಪ್ರತಾಪ್ ಸಿಂಹ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣ ದಲ್ಲಿಂದು ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆಲಸ ಕಾರ್ಯಗಳಿಗಾಗಿ ಕಚೇರಿಗೆ ಬರುವ ಸಾರ್ವಜನಿಕರಿಗೆ ತೊಂದರೆ ಕೊಡದೆ ಅವರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಮೂಲಕ ದೂರುಗಳು ಬಾರದ ರೀತಿಯಲ್ಲಿ ಕೆಲಸ ಮಾಡಬೇಕೆಂದು ತಹಶೀಲ್ದಾರ್ಗಳಿಗೆ ಪ್ರತಾಪ್ಸಿಂಹ ನಿರ್ದೇಶನ ನೀಡಿದರು.
ಕಾಡಾನೆಗಳ ಹಾವಳಿಯಿಂದ ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನತೆ ಬಹಳಷ್ಟು ತೊಂದರೆ ಅನುಭವಿಸು ತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಿಸಲು ಅಗತ್ಯ ಕ್ರಮಕೈಗೊಳ್ಳವಂತೆ ಅರಣ್ಯ ಇಲಾಖೆಗೆ ಪ್ರತಾಪ್ಸಿಂಹ ಸೂಚನೆ ನೀಡಿದರು. ಅಮ್ಮತ್ತಿ ಸಿದ್ದಾಪುರ ವ್ಯಾಪ್ತಿಯಲ್ಲಿ ಮೂರು ಆನೆಗಳನ್ನು ಸೆರೆಹಿಡಿಯಲು ಆದೇಶ ಬಂದಿದೆ. ಇಲ್ಲಿನ ಸಾಕಾನೆಗಳು ಕಾಡಾನೆ ಸೆರೆ ಕಾರ್ಯಾಚರಣೆಗೆಂದು ಬೇರೆಡೆಗೆ ಸಾಗಿಸಲ್ಪಟ್ಟಿದ್ದು, ಅವುಗಳು ಹಿಂತಿರುಗಿದ ಕೂಡಲೇ ಮೂರು ಆನೆಗಳ ಸೆರೆಗೆ ಮುಂದಾಗುವುದಾಗಿ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಕಾಡಾನೆ ಗಳಿಂದ ಸಾಕಷ್ಟು ಸಾವು ನೋವುಗಳು ಸಂಭವಿಸಿದ್ದು, ಬೆಳೆಗಳು ಕೂಡ ನಾಶವಾಗುತ್ತಿವೆ. ಆದ್ದರಿಂದ ಕಾಡಾನೆ ಸಮಸ್ಯೆಯನ್ನು ನಿರ್ಲಕ್ಷಿಸದೇ ಸಮಸ್ಯೆಯನ್ನು ಪರಿಹರಿಸುವತ್ತ ಗಮನ ಹರಿಸುವಂತೆ ಅಧಿಕಾರಿಗಳಿಗೆ ಪ್ರತಾಪ್ ಸಿಂಹ ಸೂಚಿಸಿದರು.
ಕೊಡಗು ಜಿಲ್ಲೆಯ ೫ ತಾಲೂಕು ಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರು ಗಳಿಗೆ ಮೇವು ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬAಧ ಪಟ್ಟವರಿಗೆ ಸಂಸದರು ಸೂಚಿಸಿದರು.
ಈ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಬರ ನಿರ್ವಹಣೆ ಸಂಬAಧಿಸಿದAತೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ೩೫ ಕೋಟಿ ರೂ. ಇದ್ದು, ಇತ್ತೀಚೆಗೆ ಸರ್ಕಾರ ೭.೫೦ ಕೋಟಿ ರೂ. ಬಿಡುಗಡೆ ಮಾಡಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಕುಡಿಯುವ ನೀರು ಮತ್ತು ಜಾನು ವಾರುಗಳಿಗೆ ಮೇವು ಒದಗಿಸಲಾ ಗುವುದು. ಹಾಗೆಯೇ ಬರ ನಿರ್ವಹಣೆ ಸಂಬAಧಿಸಿದAತೆ ಶಾಸಕರ ಅಧ್ಯಕ್ಷತೆ ಯಲ್ಲಿ ಸಭೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
(ಮೊದಲ ಪುಟದಿಂದ) ಕೇಂದ್ರ ಪುರಸ್ಕೃತ ೪೨ ಯೋಜನೆಗಳಿದ್ದು, ಇವುಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು. ಸಾರ್ವಜನರಿಗೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಇರಬೇಕು. ಜೊತೆಗೆ ಕಾರ್ಯಕ್ರಮ ಗಳನ್ನು ತಲುಪಿಸಬೇಕು. ಪ್ರಧಾನಮಂತ್ರಿ ಗ್ರಾಮ ಸಡಕ್ ರಸ್ತೆಗಳು ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳ ರಸ್ತೆಗಳು, ಚರಂಡಿ, ಸ್ವಚ್ಛ ಭಾರತ ಅಭಿಯಾನ, ಬ್ಯಾಂಕ್ಗಳ ಹಲವು ಕಾರ್ಯಕ್ರಮಗಳು, ಉಜ್ವಲ ಯೋಜನೆ, ಜಲಜೀವನ್ ಮಿಷನ್ ಯೋಜನೆ ಹೀಗೆ ಹಲವು ಯೋಜನೆಗಳನ್ನು ತಲುಪಿಸುವಂತೆ ಸಂಸದರು ನಿರ್ದೇಶನ ನೀಡಿದರು.
ಸ್ವಚ್ಛ ಭಾರತ ಅಭಿಯಾನದಡಿ ಪ್ರತೀ ಗ್ರಾ.ಪಂ.ಗೆ ಕಸ ವಿಲೇವಾರಿಗಾಗಿ ವಾಹನ ಒದಗಿಸಲಾಗಿದೆ. ನಗರ, ಪಟ್ಟಣ, ಗ್ರಾಮೀಣ ಪ್ರದೇಶದಲ್ಲಿಯೂ ಸಹ ಸ್ವಚ್ಛತೆಯತ್ತ ಗಮನಹರಿಸಬೇಕು. ಕೊಡಗು ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ದೂರುಗಳು ಕೇಳಿ ಬರುತ್ತಿದ್ದು, ಜಿಲ್ಲೆಯ ಪ್ರತೀ ಕುಟುಂಬಕ್ಕೂ ಜಲ ಮೂಲವನ್ನು ಬಳಸಿಕೊಂಡು ನಲ್ಲಿ ನೀರು ಸಂಪರ್ಕ ಒದಗಿಸಬೇಕು.
ಕಾವೇರಿ ನದಿ ಹುಟ್ಟುವ ಕೊಡಗು ಜಿಲ್ಲೆಯಲ್ಲಿ ದೀಪದ ಕೆಳಗೆ ಕತ್ತಲು ಎನ್ನುವಂತಾಗಬಾರದು. ಕೊಡಗು ಜಿಲ್ಲೆಯ ಎಲ್ಲಾ ಕುಟುಂಬಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು. ಗಾಳಿಬೀಡು ಬಳಿ ಇರುವ ನವೋದಯ ಶಾಲೆಗೂ ಸಹ ಕುಡಿಯುವ ನೀರು ಸಂಪರ್ಕ ಒದಗಿಸುವಂತೆ ಪ್ರತಾಪ್ ಸಿಂಹ ಹೇಳಿದರು.
ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಕೊಡಗು ಜಿಲ್ಲೆಯ ಪ್ರವಾಸಿ ಕೇಂದ್ರಗಳಲ್ಲಿ ಕಸ ವಿಲೇವಾರಿಗೆ ಸಂಬAಧಿಸಿದAತೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ಬಗ್ಗೆ ಪ್ರವಾಸಿಗರಿಗೂ ಸಹ ಅರಿವು ಮೂಡಿಸಬೇಕು. ಹಾಗೆಯೇ ಜಲ ಜೀವನ್ ಅಭಿಯಾನ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.
ಈ ಸಂದರ್ಭ ಮಾತನಾಡಿದ ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಗಮನಕ್ಕೆ ತಂದಾಗ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. ರಸ್ತೆ, ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ ಸಂಬAಧಿಸಿದAತೆ ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ತಾ.ಪಂ.ಇಒಗಳಾದ ಶೇಖರ್, ಜಯಣ್ಣ, ಅಪ್ಪಣ್ಣ ಮಾಹಿತಿ ನೀಡಿದರು.
ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ ಕೊಡಗು ಜಿಲ್ಲೆಯ ೬೩ ಕಡೆಗಳಲ್ಲಿ ಬಿಎಸ್ಎನ್ಎಲ್ ಟವರ್ ನಿರ್ಮಿಸಲು ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ ನಾಗರಹೊಳೆ ಸೇರಿದಂತೆ ವಿವಿಧ ಅರಣ್ಯ ಪ್ರದೇಶಗಳಲ್ಲಿಯೂ ಸಹ ಟವರ್ ನಿರ್ಮಾಣಕ್ಕೆ ಸಹಕರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಂಸದರಾದ ಪ್ರತಾಪ್ ಸಿಂಹ ಸೂಚಿಸಿದರು. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯರೊಬ್ಬರು ತಿತಿಮತಿ ವ್ಯಾಪ್ತಿಯ ಚೈನಿಹಡ್ಲು ಹಾಡಿಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂದು ಅವರು ಸಭೆಯ ಗಮನಕ್ಕೆ ತಂದರು.
ಈ ಸಂದರ್ಭ ಮಾತನಾಡಿದ ನಾಗರಹೊಳೆ ಹುಲಿ ಯೋಜನಾ ವ್ಯಾಪ್ತಿಯ ನಿರ್ದೇಶಕರಾದ ಹರ್ಷಕುಮಾರ್ ಅವರು ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಸಂಬAಧಿಸಿದAತೆ ಮುಂಚಿತವಾಗಿ ತಿಳಿಸಿದಲ್ಲಿ ಪರಿಶೀಲಿಸಿ ಅನುಮತಿ ನೀಡಲಾಗುವುದು. ಅದು ಬಿಟ್ಟು ಕೆಲಸ ಆರಂಭಿಸುವ ಸಂದರ್ಭದಲ್ಲಿ ಗಮನಕ್ಕೆ ತರಲಾಗುತ್ತಿದೆ ಎಂದರು.
ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪ್ರತಾಪ್ ಸಿಂಹ ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗೆ ಸೂಚಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ಕೊಡಗು ಜಿಲ್ಲೆಯಲ್ಲಿ ಸುಮಾರು ೯,೭೦೦ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ೮೩೮ ಲಕ್ಷ ರೂ. ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಾಫಿ ಮಂಡಳಿ ಉಪ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ ಅವರು ಬೆಳೆ ಹಾನಿ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯರೊಬ್ಬರು ತೋಟಗಾರಿಕೆ ಇಲಾಖೆಯಿಂದ ನೀಡಲಾಗುವ ‘ಸಸಿ’ ವಿತರಣೆ ಸಂಬAಧಿಸಿದAತೆ ಸಾರ್ವಜನಿಕರಿಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಹೆಚ್ಚಿನ ಮಾಹಿತಿ ನೀಡುವುದರ ಜೊತೆಗೆ ಗಿಡಗಳನ್ನು ವಿತರಿಸುವಂತಾಗಬೇಕು ಎಂದು ಹೇಳಿದರು.
ಈ ಕುರಿತು ಮಾತನಾಡಿದ ಸಂಸದರಾದ ಪ್ರತಾಪ್ ಸಿಂಹ ತೋಟಗಾರಿಕೆ ಇಲಾಖೆಯಿಂದ ನೀಡಲಾಗುವ ಸಸಿಗಳ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಬೇಕು. ಪಾರದರ್ಶಕವಾಗಿ ಸಸಿಗಳನ್ನು ವಿತರಿಸುವಂತೆ ನಿರ್ದೇಶನ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸರ್ಕಾರ ಈಗಾಗಲೇ ೧೩೫ ಕೋಟಿ ರೂ. ಬಿಡುಗಡೆ ಮಾಡಿದೆ. ಬಾಕಿ ಇರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಸದರು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಮಗಾರಿ ನಿರ್ವಹಿಸುತ್ತಿರುವವರು ೧೦೮ ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಕ್ರಿಟಿಕಲ್ ಕೇರೆ ಸೆಂಟರ್ ನಿರ್ಮಾಣ ಮತ್ತಿತರ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಸಂಬAಧಪಟ್ಟ ವೈದ್ಯಾಧಿಕಾರಿ ಅವರಿಗೆ ಸೂಚಿಸಿದರು.
ಕೊಡಗು ಜಿಲ್ಲೆಯಲ್ಲಿ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಪಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಶಿಕ್ಷಣಾಧಿಕಾರಿ ಕ್ರಮವಹಿಸುವಂತೆ ಸಂಸದರು ನಿರ್ದೇಶನ ನೀಡಿದರು. ಜಿಲ್ಲೆಯ ಹಾಡಿಗಳಲ್ಲಿ ಪೌಷ್ಟಿಕ ಆಹಾರ ವಿತರಣೆ ಜೊತೆಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಕುಮಾರಸ್ವಾಮಿ, ಪಿ.ಎಂ.ವಿಜಯ, ಯಮುನಾ ಚಂಗಪ್ಪ, ಚಂದ್ರಕಲಾ ಬಿ., ಚೆಕ್ಕೇರ ಅಯ್ಯಪ್ಪ, ಭಾಸ್ಕರ ನಾಯ್ಕ ಅವರು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಬಿಸಿಎಂ ಇಲಾಖಾ ಅಧಿಕಾರಿ ಕವಿತಾ, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾ ಬಾಯಿ, ಪಿಎಂಜಿಎಸ್ವೈ ಎಂಜಿನಿಯರ್ ಪ್ರಭು, ಆಹಾರ ಇಲಾಖೆ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಇತರರು ಹಲವು ಮಾಹಿತಿ ನೀಡಿದರು ಎಸ್ಪಿ ರಾಮರಾಜನ್ ಹಾಜರಿದ್ದರು.