ಕುಶಾಲನಗರ, ನ. ೩೦: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಹೆಚ್.ಕೆ. ಶಿವಶಂಕರ್ ಅಧಿಕಾರ ವಹಿಸಿಕೊಂಡರು. ಶಾಸಕ ಡಾ. ಮಂಥರ್ ಗೌಡ ನೂತನ ಪದಾಧಿ ಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ದರು.

ನಂತರ ಮಾತನಾಡಿದ ಅವರು, ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳದೆ ಸದ್ಬಳಕೆ ಮಾಡುವ ಮೂಲಕ ಜನಸಾಮಾನ್ಯರು ಹಾಗೂ ಪಕ್ಷದ ಅಭಿವೃದ್ಧಿಗೆ ಎಲ್ಲರೂ ಶ್ರಮವಹಿಸಬೇಕಿದೆ ಎಂದು ಕರೆ ನೀಡಿದರು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರದ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಿ ನೆರವಾಗುವಂತೆ ಕರೆ ನೀಡಿದರು.

ಈ ಸಂದರ್ಭ ಕೆಪಿಸಿಸಿ ಸದಸ್ಯ ಬಿ.ಜಿ. ಮಂಜುನಾಥ್ ಗುಂಡುರಾವ್, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಸಂಯೋಜಕ ನಟೇಶ್ ಗೌಡ, ಕೊಡಗು ಕಾಂಗ್ರೆಸ್ ಖಜಾಂಚಿ ಶೇಖ್ ಖಲೀಮುಲ್ಲಾ, ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಟಿ.ಪಿ. ಹಮೀದ್, ಇಂಟೆಕ್ ಅಧ್ಯಕ್ಷ ಬಿ.ಡಿ. ಅಣ್ಣಯ್ಯ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುನಿತಾ, ಕುಶಾಲನಗರ ಯುವ ಘಟಕ ಅಧ್ಯಕ್ಷ ಕಿರಣ್, ಕಿಸಾನ್ ಘಟಕದ ಅಧ್ಯಕ್ಷ ನವೀನ್, ಪ.ಜಾತಿ ಜಿಲ್ಲಾ ಘಟಕ ಅಧ್ಯಕ್ಷ ಜಯೇಂದ್ರ, ಸಾಮಾಜಿಕ ಜಾಲತಾಣ ಅಧ್ಯಕ್ಷ ರೋಷನ್, ವಿವಿಧ ಘಟಕಗಳ ಪ್ರಮುಖರು ಇದ್ದರು.