ಪೆರಾಜೆ, ನ. ೨೯: ಕರ್ನಾಟಕ ರಾಜ್ಯ ರೈತ ಸಂಘ ಗ್ರಾಮ ಘಟಕ ಪೆರಾಜೆ ಮತ್ತು ಸಂಜೀವಿನಿ ಒಕ್ಕೂಟ ಪೆರಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ಮತ್ತು ಪೌಷ್ಟಿಕ ಆಹಾರ ಮೇಳ ಹಾಗೂ ಮಾಹಿತಿ ಕಾರ್ಯಕ್ರಮ ಜ್ಯೋತಿ ಪ್ರೌಢಶಾಲೆ ಪೆರಾಜೆಯಲ್ಲಿ ರೈತ ಸಂಘದ ಅಧ್ಯಕ್ಷ ಮುಡ್ಕಜೆ ಹರಿಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪೆರಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಳ್ಳಡ್ಕ ಚಂದ್ರಕಲಾ ಬಾಲಚಂದ್ರ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಜ್ಯೋತಿ ವಿದ್ಯಾ ಸಂಘದ ಅಧ್ಯಕ್ಷ ಜ್ಞಾನೇಶ್ ನಿಡ್ಯಮಲೆ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಆಶಾ ಕೊಳಂಗಾಯ ಭಾಗವಹಿಸಿದ್ದರು.

ಪೌಷ್ಟಿಕ ಆಹಾರ ಮತ್ತು ಆರೋಗ್ಯ ಕುರಿತು ಕುಂಡಾಡು ಅಂಗನವಾಡಿ ಕಾರ್ಯಕರ್ತೆ ಎನ್.ಎಸ್. ಸರೋಜ ಮಾಹಿತಿ ನೀಡಿದರು.

ಈ ಸಂದರ್ಭ ರೈತ ಸಂಘದ ಸಂಚಾಲಕ ಉಮೇಶ್ ಕುಂಬಳಚೇರಿ, ಶಾಲಾ ಮುಖ್ಯೋಪಾಧ್ಯಾಯ ನಾಗರಾಜ, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಬಂಗಾರಕೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಶೋಕ್ ಪೀಚೆಮನೆ ಸ್ವಾಗತಿಸಿದರು. ಗೋಪಾಲ್ ಪೆರಾಜೆ ಪ್ರಾಸ್ತಾವಿಕ ಮಾತನಾಡಿದರು. ಸಂಜೀವಿನಿ ಒಕ್ಕೂಟದ ಕನಕಾಂಬಿಕೆ ನಂದ ವಂದಿಸಿದರು. ಚಂದ್ರಮತಿ ಕುಂಬಳಚೇರಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಅಡುಗೆಗಳ ಪ್ರದರ್ಶನ ಮತ್ತು ಸೇವನೆ, ತೋಟದ ಬೆಳೆಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು.