ಕ್ರಮಕ್ಕೆ ಸೂಚನೆ

ಮಡಿಕೇರಿ, ನ. ೨೯: ಮಡಿಕೇರಿ ನಗರಸಭೆಯಲ್ಲಿ ಆಡಳಿತ ವೈಫಲ್ಯ ಆಗಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ದೂರಿನ ಹಿನ್ನೆಲೆ ಸೂಕ್ತ ಕ್ರಮಕೈಗೊಂಡು ವರದಿ ಸಲ್ಲಿಸುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ನಗರಸಭೆ ಪೌರಾಯುಕ್ತರಿಗೆ ಲಿಖಿತವಾಗಿ ಸೂಚಿಸಿದ್ದಾರೆ.

ನಗರಸಭೆ ಮಾಜಿ ಸದಸ್ಯ ಪುಲಿಯಂಡ ಕೆ. ಜಗದೀಶ್ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಕಳೆದ ತಿಂಗಳು ಸಂಬAಧಪಟ್ಟ ಇಲಾಖೆಗೆ ಪತ್ರ ಬರೆದಿದ್ದರು. ಈ ಹಿನ್ನೆಲೆ ಜಿಲ್ಲಾ ನಗರಾಭಿವೃದ್ಧಿ ಕೋಶ ನಗರಸಭೆ ಪೌರಾಯುಕ್ತರಿಗೆ ಪತ್ರ ಮುಖೇನ ಸೂಚನೆ ನೀಡಿದೆ.