ಮಡಿಕೇರಿ, ನ. ೨೯ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಗ್ರ ಗಿರಿಜನ ಯೋಜನಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ‘ಗಿರಿಜನ ಉತ್ಸವ’ ಕಾರ್ಯಕ್ರಮವು ಡಿಸೆಂಬರ್ ೧ರಂದು ಬೆಳಿಗ್ಗೆ ೧೦ ಗಂಟೆಗೆ ಪೊನ್ನಂಪೇಟೆ ತಾಲೂಕು ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.