ಶನಿವಾರಸಂತೆ, ನ. ೩೦: ಬೆಂಗಳೂರಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ, ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ೧೪ ಮತ್ತು ೧೭ ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ಕರಾಟೆ ಪಂದ್ಯಾವಳಿಯಲ್ಲಿ ಶನಿವಾರಸಂತೆಯ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ೧೦ನೇ ತರಗತಿ ವಿದ್ಯಾರ್ಥಿ ಎಂ.ವಿ. ರಜಿತ್ ಭಾಗವಹಿಸಿದ್ದು ದ್ವಿತೀಯ ಸ್ಥಾನ ಪಡೆದಿದ್ದಾರೆ.