ವೀರಾಜಪೇಟೆ, ನ. ೩೦: ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಿದ್ದು ತಪಸ್ವಿ ಗಳಂತಿರಬೇಕು. ವಿದ್ಯಾರ್ಥಿಗಳ ಜ್ಞಾನದಾಹ ಹಾಗೂ ಕಾಲೇಜಿ ನಲ್ಲಿ ಕ್ರಿಯಾಶೀಲರಾಗಿ ಪಾಲ್ಗೊಳ್ಳುವ ಉತ್ಸಾಹವೇ ಉತ್ತಮ ಭವಿಷ್ಯಕ್ಕೆ ನಾಂದಿಯಾಗುವುದು ಎಂದು ಮೈಸೂರಿನ ಶಾಸ್ತಿçÃಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ. ಎನ್.ಎಂ. ತಳವಾರ ಅಭಿಪ್ರಾಯಪಟ್ಟರು.
ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ನುಡಿ ಹಬ್ಬ-೫೦’ ಕಾರ್ಯಕ್ರಮ ಉದ್ಘಾಟಿಸಿ, ಐಚ್ಛಿಕ ಕನ್ನಡ ವಿದ್ಯಾರ್ಥಿಗಳಿಂದ ರಚಿತವಾದ “ಕನ್ನಡ ಸಾಹಿತ್ಯ ಪ್ರಶ್ನೋತ್ತರ ಕೋಶ” ಪುಸ್ತಕ ಬಿಡುಗಡೆಗೊಳಿಸಿದ ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿಯೇ ಸ್ಪರ್ಧಾತ್ಮಕ ಮನೋಭಾವ ಹೆಚ್ಚಿಸಿಕೊಂಡು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಿರಿ ಎಂದರು.
ಸAಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮೈಸೂರು ಮಹಾರಾಜ ಕಾಲೇಜಿನ ಕನ್ನಡ ವಿಭಾಗದ ಪ್ರೊ. ಡಾ. ತಿಮ್ಮಯ್ಯ ಮಾತನಾಡಿ, ಕನ್ನಡ ಭಾಷೆಯ ಸಂವರ್ಧನೆಗಿರುವ ಸಾಧ್ಯತೆಗಳು ಮತ್ತು ಸವಾಲುಗಳು ಕುರಿತು ಉಪನ್ಯಾಸ ನೀಡಿದರು. ಗಡಿನಾಡು ಕನ್ನಡಿಗರು ಭಾಷಾ ಏಕತೆಯ ಮತ್ತು ಬಲವರ್ಧನೆಯ ಪಾಲುದಾರರು. ಮಾತೃದೇವೋಭವ ಎನ್ನುವಷ್ಟೇ ಮಾತೃಭಾಷೆ ಮನ್ನಣೆ ಗಳಿಸಬೇಕು. ಕನ್ನಡ ಕೇವಲ ಭಾಷೆ ಮಾತ್ರವಾಗಿರದೆ ಅನ್ನದ ಭಾಷೆಯಾಗಿರಬೇಕು ಎಂದು ಪ್ರೇರೇಪಿಸಿದರು.
ಕನ್ನಡ ಜ್ಯೋತಿ ಸಾಹಿತ್ಯ ಬಳಗದಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಕನ್ನಡ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ. ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಬಸವರಾಜು ಕೆ., ಕನ್ನಡ ಸಹಾಯಕ ಪ್ರಾಧ್ಯಾಪಕ ರಘುರಾಜು ಆರ್., ಉಪನ್ಯಾಸಕ ಡಾ. ಪ್ರಭು ಹಾಗೂ ಐ.ಕ್ಯೂ.ಎ.ಸಿ. ಸಂಚಾಲಕ ನಾಗರಾಜಮೂರ್ತಿ ಪಿ.ಎನ್. ಉಪಸ್ಥಿತರಿದ್ದರು.
ರಾಜಾ ಮಯೂರವರ್ಮ, ಕಿತ್ತೂರು ರಾಣಿ ಚೆನ್ನಮ್ಮರ ಕಿರು ಪ್ರಹಸನ ದೊಂದಿಗೆ ಪ್ರಾರಂಭಗೊAಡ ಕಾರ್ಯಕ್ರಮವು ಕನ್ನಡದ ಗೀತೆಗಳು ಹಾಗೂ ನೃತ್ಯದೊಂದಿಗೆ ಮುಕ್ತಾಯಗೊಂಡಿತು. ಕೊಡಗಿನ ಸಾಹಿತಿಗಳು, ಕೊಡಗಿನ ಪ್ರೇಕ್ಷಣೀಯ ಸ್ಥಳಗಳು, ಜ್ಞಾನಪೀಠ ಪ್ರಶಸ್ತಿ ವಿಜೇತರ ಭಾವಚಿತ್ರಗಳು, ಭಿತ್ತಿಪತ್ರಿಕೆಗಳೊಂದಿಗೆ ವೇದಿಕೆಯು ಅಲಂಕೃತಗೊAಡಿತ್ತು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ-ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.