ಸೋಮವಾರಪೇಟೆ, ನ. ೨೯: ತಮ್ಮ ದೈಹಿಕ ಹಾಗೂ ಮಾನಸಿಕ ವೈಕಲ್ಯಗಳನ್ನು ಬದಿಗೊತ್ತಿದ ವಿಶೇಷ ಚೇತನ ಮಕ್ಕಳು ಅತ್ಯುತ್ಸಾಹದಿಂದ ಮೈದಾನದಲ್ಲಿ ಸಂಭ್ರಮಿಸಿ ದಿನ ಕಳೆದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಶೇಷ ಚೇತನರ ಸಬಲೀಕರಣಕ್ಕೆ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಘ ಸಂಸ್ಥೆಗಳು, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಆಯುಷ್ ಇಲಾಖೆಯ ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ವಿಶೇಷ ಚೇತನರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಭ್ರಮದಿAದ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಶೇಷ ಚೇತನರ ಸಬಲೀಕರಣ ಇಲಾಖೆಯ ಮಾಹಿತಿ ಸಲಹೆಗಾರ ನವೀನ್, ಡಿ. ೩ರಂದು ವಿಶ್ವ ವಿಶೇಷ ಚೇತನರ ದಿನಾಚರಣೆ ಆಚರಿಸಲಾಗುತ್ತಿದೆ. ವಿಶೇಷ ಚೇತನರಿಗೂ ಅವಕಾಶ ಲಭಿಸಬೇಕು. ಹಾಗಾದಾಗ ಮಾತ್ರ ಚೈತನ್ಯದೊಂದಿಗೆ ಸಾಧನೆ ಸಾಧ್ಯ. ಈ ನಿಟ್ಟಿನಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ. ತಾಲೂಕು ಮಟ್ಟದ ಸ್ಪರ್ಧಾ ವಿಜೇತರಿಗೆ ಮಡಿಕೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜೇಶ್ ಮಾತನಾಡಿ, ವಿಶೇಷ ಚೇತನರು ತಮ್ಮ ನ್ಯೂನತೆಗಳನ್ನು ಬದಿಗೊತ್ತಿ ಸಮಾಜದೊಂದಿಗೆ ಬೆರೆಯಬೇಕು. ಅವಕಾಶಗಳನ್ನು ಸದುಪಯೋU Àಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕ್ಷೇತ್ರ ಸಮನ್ವಯಾಧಿಕಾರಿ ಹೇಮಂತ್ ಮಾತನಾಡಿ, ವಿಶೇಷ ಚೇತನರ ಮನೋಸ್ಥೆöÊರ್ಯ ಹೆಚ್ಚಿಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆ ವಿಶೇಷ ಚೇತನರ ದಿನಾಚರಣೆ ಘೋಷಿಸಿದೆ. ತಮ್ಮಲ್ಲಿರುವ ಕೌಶಲ್ಯಗಳನ್ನು ಹೊರಹಾಕಲು ಈ ವೇದಿಕೆ ಸಹಕಾರಿಯಾಗಿದೆ. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಶಿಕ್ಷಣ ಇಲಾಖೆಯು ವಿಶೇಷ ಚೇತನರ ಅಭ್ಯುದಯಕ್ಕೆ ಸದಾ ಬದ್ಧವಾಗಿದೆ ಎಂದರು. ಆಯುಷ್ ಇಲಾಖೆಯ ವೈದ್ಯೆ ಡಾ.ಶ್ವೇತಾ ಮಾತನಾಡಿ, ಆಯುಷ್ ಇಲಾಖೆಯ ಚಿಕಿತ್ಸಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಚೌಡ್ಲು ಗ್ರಾ.ಪಂ. ಅಧ್ಯಕ್ಷೆ ಗೀತಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ಸುಕುಮಾರಿ, ವಿವೇಕಾನಂದ ಯೂತ್ ಮೂವ್ ಮೆಂಟ್‌ನ ಪ್ರಕಾಶ್, ಇನ್ನರ್ ವೀಲ್ ಅಧ್ಯಕ್ಷೆ ಸಂದ್ಯಾರಾಣಿ, ಪಾಂಚಜನ್ಯ ಯುವಕ ಸಂಘದ ಅಧ್ಯಕ್ಷ ಪ್ರಶಾಂತ್, ತಾಲೂಕು ಪಂಚಾಯಿತಿ ಸಿಬ್ಬಂದಿ ಪರಮೇಶಪ್ಪ, ತಾಲೂಕು ಎಂ.ಆರ್.ಡಬ್ಲ್ಯೂ. ಹರೀಶ್, ತಾಲೂಕು ವಿಶೇಷ ಚೇತನರ ಸಂಘದ ಅಧ್ಯಕ್ಷ ಸಂಗಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಶೇಷ ಚೇತನರಿಗೆ ಸರಳ ಕ್ರೀಡೆಗಳನ್ನು ನಡೆಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ಸ್ಪರ್ಧೆಯಲ್ಲಿ ಮಕ್ಕಳು ಉತ್ಸಾಹದಿಂದ ಭಾಗಿ ಯಾದರು. ಆಯುಷ್ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.