ಪೊನ್ನAಪೇಟೆ, ನ. ೩೦: ಕೊಡಗು ಮುಸ್ಲಿಂ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಕೊಡಗು ಜಿಲ್ಲಾಮಟ್ಟದ ೧೩ನೇ ವರ್ಷದ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿಯನ್ನು ೨೦೨೪ರ ಜನವರಿ ೧೯ ರಿಂದ ವೀರಾಜಪೇಟೆಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಈ ಸಂಬAಧ ಕೊಡಗು ಮುಸ್ಲಿಂ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಪಿ.ಎ. ಹನೀಫ್ ಅವರ ಅಧ್ಯಕ್ಷತೆಯಲ್ಲಿ ವೀರಾಜಪೇಟೆಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂದಿನ ಜನವರಿ ೧೯ರಿಂದ ೨೧ ರವರೆಗೆ ಒಟ್ಟು ೩ ದಿನಗಳ ಕಾಲ ಈ ವಾಲಿಬಾಲ್ ಪಂದ್ಯಾವಳಿಯನ್ನು ನಡೆಸಲು ತೀರ್ಮಾನಿಸಲಾಗಿದೆ.

ಕೋವಿಡ್ ಸೇರಿದಂತೆ ಮತ್ತಿತರ ಕಾರಣದಿಂದಾಗಿ ಕಳೆದ ಮೂರು ವರ್ಷಗಳಿಂದ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ಜನವರಿಯಲ್ಲಿ ನಡೆಯಲಿರುವ ಪಂದ್ಯಾವಳಿಯನ್ನು ಅದ್ಧೂರಿಯಾಗಿ ಮತ್ತು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಪಿ.ಎ. ಹನೀಫ್ ತಿಳಿಸಿದ್ದಾರೆ.

ಪಂದ್ಯಾವಳಿಯ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ಮುಂದಿನ ಸಭೆಯಲ್ಲಿ ರಚಿಸಲಾಗುವುದು. ಆಟಗಾರರಿಗೆ ಮತ್ತು ಪ್ರೇಕ್ಷಕರಿಗೆ ಯಾವುದೇ ತೊಂದರೆಯಾಗದAತೆ ಎಲ್ಲಾ ಕ್ರಮ ತೆಗೆದುಕೊಳ್ಳಲು ಶೀಘ್ರದಲ್ಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಸಭೆಯಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ಪಿ.ಎ. ಕರೀಂ ಕಡಂಗ, ಪ್ರಧಾನ ಕಾರ್ಯದರ್ಶಿ ಎಂ.ಎA. ಇಸ್ಮಾಯಿಲ್ ಗುಂಡಿಕೆರೆ, ಕೋಶಾಧಿಕಾರಿ ಎಚ್.ಎ. ಹಂಸ ಕೊಟ್ಟಮುಡಿ, ಸಹ ಕಾರ್ಯದರ್ಶಿ ಕೋಳುಮಂಡ ರಫೀಕ್, ನಿರ್ದೇಶಕರಾದ ಕೆ.ಎಸ್. ಸೂಫಿ, ಸಿ.ಎ. ರಾಜಿಕ್ ಮೊದಲಾದವರು ಉಪಸ್ಥಿತರಿದ್ದರು.