ಬೆಂಗಳೂರಿನ ೪೮ ಶಾಲೆಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರು, ಡಿ. ೧: ಬೆಂಗಳೂರಿನ ನಲವತ್ತೆಂಟು ಖಾಸಗಿ ಶಾಲೆಗಳಿಗೆ ಶುಕ್ರವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇರುವ ಇಮೇಲ್ ಬಂದಿದ್ದು, ಸಿಬ್ಬಂದಿ ಮತ್ತು ಪೋಷಕರಲ್ಲಿ ಭಯ ಹುಟ್ಟಿಸಿತು. ಶಾಲಾ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಂಬ್ ನಿಷ್ಕಿçಯ ದಳ ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪೊಲೀಸರು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ತಕ್ಷಣವೇ ಶಾಲೆಯ ಆವರಣದಿಂದ ಹೊರಗೆ ಕಳುಹಿಸಿ, ತೀವ್ರ ತಪಾಸಣೆ ನಡೆಸಿದರು. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಇನ್ನೂ ಪತ್ತೆ ಯಾಗಿಲ್ಲ ಮತ್ತು ಪ್ರಾಥಮಿಕ ತನಿಖೆಯಿಂದ ಇದು ಹುಸಿ ಬಾಂಬ್ ಸಂದೇಶ ಎಂದು ತಿಳಿದು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇಮೇಲ್ ಬೆದರಿಕೆಯ ನಂತರ ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಗಿದೆ. ಆತಂಕಗೊAಡ ಪೋಷಕರು ಭಯಭೀತರಾಗಿ ತಮ್ಮ ಕಚೇರಿ ಮತ್ತು ಮನೆಗಳಿಂದ ಶಾಲೆಗಳಿಗೆ ಧಾವಿಸಿ, ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಇನ್ನು ಬಾಂಬ್ ಬೆದರಿಕೆ ಇರುವ ಶಾಲೆಯೊಂದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದು, ಅಲ್ಲಿನ ಪರಿಸ್ಥಿತಿ ಕುರಿತು ಶಾಲೆ ಸಿಬ್ಬಂದಿ ಹಾಗೂ ಪೊಲೀಸರಿಂದ ಮಾಹಿತಿ ಪಡೆದರು.

ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಭಯೋತ್ಪಾದಕನ ಹತ್ಯೆ

ಶ್ರೀನಗರ, ಡಿ. ೧: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಅರಿಹಾಲ್ ಗ್ರಾಮದಲ್ಲಿ ಉಗ್ರ ಅಡಗಿರುವ ಕುರಿತು ಲಭ್ಯವಾದ ನಿರ್ದಿಷ್ಟ ಗುಪ್ತಚರ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಗುರುವಾರ ಆ ಪ್ರದೇಶದಲ್ಲಿ ಗಸ್ತು ಮತ್ತು ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ಅಡಗಿಕೊಂಡಿದ್ದ ಭಯೋತ್ಪಾದಕ ಭದ್ರತಾ ಪಡೆಗಳ ಮೇಲೆ ಮನಬಂದAತೆ ಗುಂಡು ಹಾರಿಸಿದ್ದಾನೆ. ಅದಕ್ಕೆ ಪ್ರತೀಕಾರವಾಗಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿವೆ. ಪಿಂಜೂರ ಶೋಪಿಯಾನ್‌ನ ನಿವಾಸಿ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿಯೊಂದಿಗೆ ಸಂಬAಧ ಹೊಂದಿರುವ ಕಿಫಾಯತ್ ಅಯೂಬ್ ಅಲಿ ಎಂದು ಗುರುತಿಸಲಾದ ಉಗ್ರನನ್ನು ಸದೆಬಡಿಯಲಾಗಿದೆ.

ಸಮಸ್ಯೆ ಬಗೆಹರಿಸಿಕೊಳ್ಳುವಂತೆ ರಾಜ್ಯಪಾಲರಿಗೆ ಸುಪ್ರೀಂ ಸೂಚನೆ

ನವದೆಹಲಿ, ಡಿ. ೧: ರಾಜ್ಯ ವಿಧಾನಸಭೆ ಅಂಗೀಕರಿಸಿದ ವಿಧೇಯಕಗಳಿಗೆ ಒಪ್ಪಿಗೆ ನೀಡದಿರುವ ವಿಚಾರವನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರೊಂದಿಗೆ ಸಭೆ ನಡೆಸಿ ಪರಿಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಶುಕ್ರವಾರ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರಿಗೆ ಸೂಚಿಸಿದೆ. ವಿಧೇಯಕಗಳಿಗೆ ಒಪ್ಪಿಗೆ ನೀಡದ ರಾಜ್ಯಪಾಲರ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ರಾಜ್ಯಪಾಲರು ಬಿಕ್ಕಟ್ಟು ಪರಿಹರಿಸಬೇಕೆಂದು ನಾವು ಬಯಸುತ್ತೇವೆ. ರಾಜ್ಯಪಾಲರು ಮುಖ್ಯಮಂತ್ರಿಯೊAದಿಗೆ ಸಭೆ ನಡೆಸಿ, ಬಿಕ್ಕಟ್ಟನ್ನು ಪರಿಹರಿಸಿದರೆ ನಾವು ಅದನ್ನು ಶ್ಲಾಘಿಸುತ್ತೇವೆ ಎಂದು ಹೇಳಿದೆ ಮತ್ತು ವಿಚಾರಣೆಯನ್ನು ಡಿಸೆಂಬರ್ ೧೧ಕ್ಕೆ ಮೂಂದೂಡಿದೆ.

ರಾಜೀವ್ ಚಂದ್ರಶೇಖರ್ ವಿರುದ್ಧ ಕ್ರಮ ಕೈಗೊಳ್ಳದಂತೆ ಆದೇಶ

ಕೊಚ್ಚಿ, ಡಿ. ೧: ಕಲಮಸ್ಸೇರಿ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬAಧಿಸಿದAತೆ ದ್ವೇಷಪೂರಿತ ಭಾಷಣದ ಆರೋಪದ ಮೇಲೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಡಿಸೆಂಬರ್ ೧೪ ರವರೆಗೆ ಬಂಧನ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳದಂತೆ ಕೇರಳ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. ಕಲಮಸ್ಸೇರಿ ಸ್ಫೋಟದ ನಂತರ ಅವರ ವಿವಾದಾತ್ಮಕ ಹೇಳಿಕೆಗಳ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ಎರಡು ವಾರಗಳ ಕಾಲ ಯಾವುದೇ ಕ್ರಮ ತೆಗೆದುಕೊಳ್ಳುವುದನ್ನು ಹೈಕೋರ್ಟ್ ನಿಷೇಧಿಸಿದೆ. ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ದಾಖಲಾದ ಎರಡು ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಸ್. ಡಯಾಸ್ ನೇತೃತ್ವದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಕಲಮಸ್ಸೇರಿ ಸ್ಫೋಟದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ನೀಡಿದ್ದಕ್ಕಾಗಿ ರಾಜೀವ್ ಚಂದ್ರಶೇಖರ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಡಿಸೆಂಬರ್ ೧೪ ರಂದು ಹೈಕೋರ್ಟ್ ಮತ್ತೆ ಅರ್ಜಿಯ ವಿಚಾರಣೆ ನಡೆಸಲಿದೆ.

ನಕ್ಸಲ್‌ವಾದದ ಸಂಪೂರ್ಣ ನಿರ್ಮೂಲನೆ-ಅಮಿತ್ ಷಾ

ಜಾರ್ಖಂಡ್, ಡಿ. ೧: ದೇಶದಲ್ಲಿ ನಕ್ಸಲ್‌ವಾದದ ಸಂಪೂರ್ಣ ನಿರ್ಮೂಲನೆಯ ಕಾಲ ಸನ್ನಿಹಿತವಾಗಿದೆ. ಈ ಹೋರಾಟದಲ್ಲಿ ಜಯ ಸಾಧಿಸುವ ದೃಢ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದರು. ಅರೆಸೇನಾ ಪಡೆಯ ೫೯ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಗಡಿ ಭದ್ರತಾ ಪಡೆ ಯೋಧರನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಹತ್ತು ವರ್ಷಗಳಲ್ಲಿ ನಕ್ಸಲ್ ಹಿಂಸಾಚಾರ ಶೇ. ೫೨ರಷ್ಟು ಇಳಿಮುಖವಾಗಿದೆ. ನಕ್ಸಲರಿಂದ ಹತ್ಯೆಗೀಡಾಗುವವರ ಸಂಖ್ಯೆ ಶೇ. ೭೦ರಷ್ಟು ಇಳಿದಿದೆ. ಜೊತೆಗೆ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಶೇ. ೯೬ರಿಂದ ಶೇ. ೪೫ಕ್ಕೆ ತಗ್ಗಿದೆ. ಹಾಗೆಯೇ ನಕ್ಸಲರ ದಾಳಿ ಎದುರಿಸಬೇಕಿದ್ದ ಪೊಲೀಸ್ ಠಾಣೆಗಳ ಸಂಖ್ಯೆ ೪೯೫ರಿಂದ ೧೭೬ಕ್ಕೆ ಇಳಿದಿದೆ ಎಂದರು.