ಮುಳ್ಳೂರು, ನ. ೩೦: ಸಮೀಪದ ಕೊಡ್ಲಿಪೇಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನವನ್ನು ಆಚರಿಸಲಾಯಿತು.

ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಅಭಿಷೇಕ್ ಅಧ್ಯಕ್ಷತೆ ವಹಿಸಿಕೊಂಡಿದ್ದರು. ದಿನದ ಮಹತ್ವ ಕುರಿತು ವಿದ್ಯಾರ್ಥಿಗಳು ಮಾತನಾಡಿದರು. ಶಾಲಾ ವಿದ್ಯಾರ್ಥಿ ಕಿರಣ್‌ಕುಮಾರ್ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ಮತ್ತು ನಿರೂಪಣೆ ಮೂಲಕ ಶಾಲಾ ಶಿಕ್ಷಕರು, ಪೋಷಕರು ಹಾಗೂ ಸಭಿಕರ ಗಮನ ಸೆಳೆದರು. ಶಾಲಾ ವಿದ್ಯಾರ್ಥಿಗಳಿಂದ ನಾಟಕ, ನೃತ್ಯ, ಗಾಯನ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತಗೊಂಡ ಮಕ್ಕಳಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿಗಳು ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಆಶಾ, ಸಹ ಶಿಕ್ಷಕರಾದ ಸ್ನೇಹಾಬಸಮ್ಮ, ರೀನಾ, ಉಷಾದೇವಿ, ಕವಿತಾ, ಚಿತ್ರಕಲಾ, ಗೌರಮ್ಮ, ಮಂಜುಳ, ನಂದಿನಿ ಶಾಲೆಯ ಆಂಗ್ಲ ಮಾಧ್ಯಮ ವಿಭಾಗದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಾದ ಸೂರಜ್, ಚರಣ್ ಹಾಜರಿದ್ದರು.