ವೀರಾಜಪೇಟೆ, ನ. ೩೦: ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ಹಾಗೂ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಡ್ಯಾನ್ಸ್ ಫೆಡರೇಷನ್ ವತಿಯಿಂದ ಮೈಸೂರಿನ ಶಾರಾದ ವಿಲಾಸ ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಮಟ್ಟದಲ್ಲಿ ನಡೆದ ಶಾಸ್ತಿçÃಯ ನೃತ್ಯ ಹಾಗೂ ಜಾನಪದ ನೃತ್ಯ ವಿಭಾಗದಲ್ಲಿ ಅರಮೇರಿ ಎಸ್.ಎಂ.ಎಸ್. ವಿದ್ಯಾಪೀಠದ ೨ನೇ ತರಗತಿ ವಿದ್ಯಾರ್ಥಿ ಯೆದ್ವಿಕ್ ಎ. ಅವರು ವಿವಿಧ ವಿಭಾಗಗಳಲ್ಲಿ ಮೂರು ಚಿನ್ನದ ಪದಕಗಳನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕಳೆದ ಮೂರು ವರ್ಷಗಳಿಂದ ವೀರಾಜಪೇಟೆಯ ನಾಟ್ಯಾಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಇವರು ವೀರಾಜಪೇಟೆಯ ಅಜಿತ್ ಹಾಗೂ ಶೋಬಿಕ ದಂಪತಿ ಪುತ್ರ.